ಪ್ರಮುಖ ಸುದ್ದಿಮೈಸೂರು

ನಾಡಿನ ಜನತೆ ಎಲ್ಲ ಸಂಕಷ್ಟದಿಂದ ಮುಕ್ತಗೊಂಡು ನೆಮ್ಮದಿಯ ಜೀವನ ನಡೆಸುವಂತಾಗಲಿ : ತಾಯಿ ಚಾಮುಂಡೇಶ್ವರಿಯಲ್ಲಿ ಸಿಎಂ ಪ್ರಾರ್ಥನೆ

ಮೈಸೂರು, ಅ 26:-ಜನರು ಎಲ್ಲ ಸಂಕಷ್ಟಗಳಿಂದ ಮುಕ್ತಗೊಂಡು ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಅವರಿಂದು ಮೈಸೂರಿನ ಲಲಿತ್ ಮಹಲ್ ಹೆಲಿಪ್ಯಾಡ್ ಬಳಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕೋವಿಡ್ ಹಾಗೂ ಬೇರೆ ಬೇರೆ ಕಾರಣಗಳಿಗೋಸ್ಕರ ಬಹಳ ಸರಳವಾಗಿ ದಸರಾ ಮತ್ತು ಜಂಬೂ ಸವಾರಿಯನ್ನು ಮಾಡುತ್ತಿದ್ದೇವೆ. ತಾಯಿ ಚಾಮುಂಡೇಶ್ವರಿ ದಯೆಯಿಂದ ಈ ಕೊರೋನಾದಿಂದ ಬಿಡುಗಡೆಗೊಂಡ ಮೇಲೆ ಮುಂದಿನ ವರ್ಷ ಬಹಳ ವಿಜೃಂಭಣೆಯಿಂದ ನಾವು ಆಚರಿಸುವಂತಹ ಶಕ್ತಿ ಆ ತಾಯಿ ಚಾಮುಂಡೇಶ್ವರಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡು ನಾಡಿನ ಎಲ್ಲ ಜನರಿಗೆ ವಿಜಯದಶಮಿಯ ಶುಭ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರುತ್ತೇನೆ ಎಂದರು.
ನಾಡಿನ ಜನರು ಎಲ್ಲ ಸಂಕಷ್ಟಗಳಿಂದ ಪಾರಾಗಿ, ನೆಮ್ಮದಿಯಿಂದ ಬದುಕುವ ಒಳ್ಳೆಕಾಲ ತಾಯಿ ಚಾಮುಂಡೇಶ್ವರಿ ಕೊಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.
ಈ ಸಂದರ್ಭ ಮುಖ್ಯಮಂತ್ರಿಗಳ ಜೊತೆಗೆ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಎಸ್.ಎ.ರಾಮದಾಸ್, ಎಲ್ ನಾಗೇಂದ್ರ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಮಾಜಿ ಸಚಿವ ಹೆಚ್.ವಿಜಯ್ ಶಂಕರ್ ಇದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: