ಮೈಸೂರು

ಬಿಜಿಎಸ್ ಅಪೋಲೋದಲ್ಲಿ ವಿಶ್ವ ಆರೋಗ್ಯ ದಿನಾಚರಣೆ

ಮೈಸೂರಿನ ನ್ಯೂಕಾಂತ್ ರಾಜ್ ಅರಸ್ ರಸ್ತೆಯಲ್ಲಿರುವ ಬಿಜಿಎಸ್ ಅಪೋಲೋ ಆಸ್ಪತ್ರೆಯಲ್ಲಿ ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಮೈಸೂರು ಮಹಾನಗರಪಾಲಿಕೆಯ ಮೇಯರ್ ಎಂ.ಜೆ.ರವಿಕುಮಾರ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಆರೋಗ್ಯ ಮನುಷ್ಯನಿಗೆ ತುಂಬಾ ಮುಖ್ಯ. ಆರೋಗ್ಯ ಸರಿಯಿಲ್ಲದಿದ್ದಲ್ಲಿ ಏನನ್ನೂ ಮಾಡಲು ಸಾಧ್ಯವಾಗದು. ಅನಾರೋಗ್ಯ ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಕಂಡು ಚಿಕಿತ್ಸೆ ಪಡೆದು ಆರೋಗ್ಯವಂತರಾಗಬೇಕು ಎಂದರು.

ಈ ಸಂದರ್ಭ ಮೈಸೂರು ಆದಿಚುಂಚನಗಿರಿ ಶಾಖಾ ಮಠದ ಸೋಮನಾಥ ಸ್ವಾಮೀಜಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸವರಾಜ, ಅಪೋಲೋ ಬಿಜಿಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಅಂಜಲಿ ಅರುಣ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: