ಕರ್ನಾಟಕಪ್ರಮುಖ ಸುದ್ದಿ

ಹಿರಿಯ ಐಪಿಎಸ್ ಅಧಿಕಾರಿ ಡಾ.ಪಿ.ರವೀಂದ್ರನಾಥ್ ರಾಜೀನಾಮೆ

ಬೆಂಗಳೂರು,ಅ.29- ಕಿರುಕುಳದಿಂದ ಬೇಸತ್ತು ಹಿರಿಯ ಐಪಿಎಸ್‌ ಅಧಿಕಾರಿ ಡಾ.ಪಿ.ರವೀಂದ್ರನಾಥ್ ರಾಜೀನಾಮೆ ನೀಡಿದ್ದಾರೆ.

ಬುಧವಾರ ತಡರಾತ್ರಿ ಡಿಜಿಗೆ ರಾಜೀನಾಮೆ ಸಲ್ಲಿಸಲು ತೆರಳಿದ್ದರು ಎನ್ನಲಾಗಿದೆ. ಆದರೆ ಡಿಜಿಯ ಭೇಟಿಗೆ ಅವಕಾಶ ಸಿಗದ ಹಿನ್ನೆಲೆ ಕಂಟ್ರೋಲ್‌ ರೂಂಗೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಪತ್ರದಲ್ಲಿ ಕಳೆದ ನಾಲ್ಕು ವರ್ಷದಿಂದ ನಾನು ಇಲಾಖೆಯಲ್ಲಿ ತೀವ್ರ ಸಮಸ್ಯೆಗಳನ್ನು ಕೆಲವರಿಂದ ಅನುಭವಿಸಿರುವುದಾಗಿ ಆರೋಪಿಸಿರುವ ಅವರು, ಪರೋಕ್ಷ ಕಿರುಕುಳದಿಂದ ತೀವ್ರ ಸಂಕಟಪಟ್ಟಿದ್ದೆ. ಇದೀಗ ರಾಜೀನಾಮೆ ನೀಡುವ ಮೂಲಕ ನೆಮ್ಮದಿಯ ಜೀವನದ ದಾರಿಯನ್ನು ತುಳಿಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನನ್ನ ಸೇವೆ ವಿಚಾರದಲ್ಲಿ ಸುಪ್ರೀಂಕೋರ್ಟ್‌ ನ್ಯಾಯ ನೀಡದರು ಕೆಲವರಿಂದ ಅನ್ಯಾಯವಾಗಿದೆ ಎಂದು ಪತ್ರದಲ್ಲಿ ತನ್ನ ನೋವು ತೋಡಿಕೊಂಡಿದ್ದಾರೆ. ಇನ್ನು ಮೂಲಗಳ ಪ್ರಕಾರ ಬುಧವಾರ ರಾಜ್ಯ ಸರ್ಕಾರ ಮೂವರು ಅಧಿಕಾರಿಗಳಿಗೆ ಡಿಜಿಪಿ ಬಡ್ತಿ ನೀಡಿತ್ತು. ತನಗಿಂತ ಕಿರಿಯ ಅಧಿಕಾರಿಗಳಿಗೆ ಬಡ್ತಿ ನೀಡಿರುವುದರ ಬಗ್ಗೆ ಅಸಮಾಧಾನ ಹೊಂದಿದ್ದರು ಎನ್ನಲಾಗಿದೆ. ಸದ್ಯ ರವೀಂದ್ರನಾಥ್‌ ಅರಣ್ಯ ಇಲಾಖೆಯ ಎಡಿಜಿಪಿಯಾಗಿದ್ದಾರೆ. (ಎಂ.ಎನ್)

Leave a Reply

comments

Related Articles

error: