ಮೈಸೂರು

ಕಾರು-ಬೈಕ್ ಡಿಕ್ಕಿ : ಸವಾರನಿಗೆ ಗಾಯ

ಮೈಸೂರು – ನಂಜನಗೂಡು ರಸ್ತೆಯ ಗುಂಡೂರಾವ್ ನಗರದ ದ್ವಾರದ ಬಳಿ ಕಾರು ಹಾಗೂ ಮೋಟಾರ್ ಬೈಕ್ ನಡುವೆ ಸಂಭವಿಸಿದ  ಅಪಘಾತದಲ್ಲಿ ಬೈಕ್ ಸವಾರನ ತಲೆಗೆ ಏಟು ಬಿದ್ದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಗಾಯಾಳುವನ್ನು ಮೈಸೂರಿನ  ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಪೋಲೀಸ್ ನಿಯಂತ್ರಣ ಕೊಠಡಿಗೆ  ಸಾರ್ವಜನಿಕರು ಮಾಹಿತಿ ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: