ಪ್ರಮುಖ ಸುದ್ದಿವಿದೇಶ

ಪುಲ್ವಾಮಾ ದಾಳಿ ಪಾಕ್ ಸಾಧಿಸಿದ ಯಶಸ್ಸು :ಪಾಕ್ ಮಂತ್ರಿಯೋರ್ವರ ಹೇಳಿಕೆ

ವಿದೇಶ(ಇಸ್ಲಾಮಾಬಾದ್)ಅ.30:- ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದ್ದ ಭೀಕರ ಭಯೋತ್ಪಾದಕ ದಾಳಿಗೆ ಪಾಕಿಸ್ತಾನವೇ ಕಾರಣ ಎಂದು ಹಿರಿಯ ಮಂತ್ರಿಯೊಬ್ಬರು ಸಂಸತ್‌ನಲ್ಲೇ ಒಪ್ಪಿಕೊಂಡಿದ್ದಾರೆ ಹೀಗೆಂದು ಮಾಧ್ಯಮವೊಂದು ವರದಿ ಮಾಡಿದೆ.
2019ರ ಫೆ.14ರಂದು ಸಂಭವಿಸಿದ್ದ ಈ ಭಯೋತ್ಪಾದಕ ದಾಳಿಯಿಂದಾಗಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧಭೀತಿ ಎದುರಾಗಿತ್ತು. ಭಾರತಕ್ಕೆ ನುಗ್ಗಿ ಅವರ ಮನೆಯಲ್ಲೇ ಹೊಡೆದೆವು. ಪುಲ್ವಾಮಾದಲ್ಲಿನ ನಮ್ಮ ಯಶಸ್ಸು, ಇಮ್ರಾನ್ ಖಾನ್ ನೇತೃತ್ವದಲ್ಲಿ ಸಾಧಿಸಿದ ಯಶಸ್ಸಾಗಿದೆ. ನೀವು ಮತ್ತು ನಾವೆಲ್ಲರೂ ಆ ಯಶಸ್ಸಿನ ಭಾಗವಾಗಿದ್ದೇವೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಚೌಧರಿ ಸಂಸತ್‌ನ ಚರ್ಚೆಯೊಂದರ ಸಂದರ್ಭದಲ್ಲಿ ಹೇಳಿದ್ದಾರೆ.
ಅಭಿನಂದನ್‌ ವರ್ಧಮಾನ್‌ ಅವರನ್ನು ಪಾಕಿಸ್ತಾನ ಬಿಡುಗಡೆ ಮಾಡದಿದ್ದರೆ ಭಾರತವು ‘ರಾತ್ರಿ 9 ಗಂಟೆಗೆ ದಾಳಿ ಮಾಡಬಹುದು’ ಎಂದು ಪ್ರಮುಖ ಸಭೆಯಲ್ಲಿ ವಿದೇಶಾಂಗ ಸಚಿವ ಷಾಹ್‌ ಮಹಮೂದ್‌ ಖುರೇಷಿ ಹೇಳಿದ್ದರು. ಆಗ ಸೇನಾ ಮುಖ್ಯಸ್ಥ ಖಮರ್‌ ಜಾವೇದ್‌ ಬಾಜ್ವಾ ಕಾಲುಗಳು ನಡುಗುತ್ತಿದ್ದವು ಎಂದು ಪಿಎಂಎಲ್‌-ಎನ್‌ ಮುಖಂಡ ಅಯಾಝ್ ಸಾದಿಖ್ ಪಾಕಿಸ್ತಾನ ಸಂಸತ್ತಿನಲ್ಲಿ ಹೇಳಿದ್ದರು. ಇದಾದ ಮರುದಿನವೇ ಫವಾದ್‌ ಚೌಧರಿ ಈ ಮಹತ್ವದ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಫವಾದ್‌ ಹೇಳಿಕೆಯಿಂದಾಗಿ ಸಂಸತ್‌ನಲ್ಲಿ ಕೋಲಾಹಲ ಸೃಷ್ಟಿಯಾಗಿತ್ತು. ಈ ಕುರಿತು ಮಾಧ್ಯಮವೊಂದು ವರದಿ ಮಾಡಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: