ಪ್ರಮುಖ ಸುದ್ದಿ

ನೀತಿ ಸಂಹಿತೆ ಉಲ್ಲಂಘನೆ : ಮಾಜಿ ಮುಖ್ಯಮಂತ್ರಿ ಕಮಲ ನಾಥ್ ಅವರ ‘ಸ್ಟಾರ್ ಪ್ರಚಾರಕ’ ಸ್ಥಾನಮಾನವನ್ನು ರದ್ದುಪಡಿಸಿದ ಚುನಾವಣಾ ಆಯೋಗ

ದೇಶ( ನವದೆಹಲಿ)ಅ.31:- ಚುನಾವಣಾ ಆಯೋಗ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಕಮಲ ನಾಥ್ ಅವರ ‘ಸ್ಟಾರ್ ಪ್ರಚಾರಕ’ ಸ್ಥಾನಮಾನವನ್ನು ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯ ಪ್ರಚಾರದ ವೇಳೆ ಮಾದರಿ ಸಂಹಿತೆಯನ್ನು ಪದೇ ಪದೆ ಉಲ್ಲಂಘಿಸಿದ್ದಕ್ಕಾಗಿ ರದ್ದುಪಡಿಸಿದೆ.
ಆಯೋಗವು ಕಮಲ್‌ನಾಥ್‌ ಅವರ ರಾಜಕೀಯ ಪಕ್ಷದ ನಾಯಕ (ಸ್ಟಾರ್ ಪ್ರಚಾರ) ಸ್ಥಾನಮಾನವನ್ನು ಈ ಉಪ ಚುನಾವಣೆಗೆ ಅನ್ವಯವಾಗುವಂತೆ ಈ ಕೂಡಲೇ ರದ್ದುಪಡಿಸಲಾಗಿದೆ ಎಂದು ಆದೇಶ ಹೊರಡಿಸಿದೆ. ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಅವರಿಗೆ ನೀಡಲಾದ ಸಲಹೆಯನ್ನು ಸಂಪೂರ್ಣ ಕಡೆಗಣಿಸಿದ್ದಕ್ಕಾಗಿ ಈ ರೀತಿ ಆದೇಶ ಹೊರಡಿಸಿದ್ದು, ಸ್ಟಾರ್ ಪ್ರಚಾರಕರಾಗಿ ಕಮಲ್‌ ನಾಥ್ ಅವರಿಗೆ ಯಾವುದೇ ಅನುಮತಿ ನೀಡುವುದಿಲ್ಲ ಎಂದು ಹೇಳಿದೆ.
ಇಂದಿನಿಂದ ಕಮಲ್‌ನಾಥ್ ಅವರು ಒಂದು ವೇಳೆ ಯಾವುದೇ ಪ್ರಚಾರ ಕೈಗೊಂಡರೆ ಪ್ರಯಾಣ, ವಾಸ್ತವ್ಯ ಮತ್ತು ಭೇಟಿಗೆ ಸಂಬಂಧಿಸಿದ ಸಂಪೂರ್ಣ ವೆಚ್ಚವನ್ನು ಸಂಬಂಧಿಸಿದ ಕ್ಷೇತ್ರದ ಅಭ್ಯರ್ಥಿಯೇ ಭರಿಸಬೇಕು ಎಂದು ಆಯೋಗ ತಿಳಿಸಿದೆ.
ಚುನಾವಣಾ ಆಯೋಗದ ಆದೇಶದ ವಿರುದ್ಧ ಕಾಂಗ್ರೆಸ್‌ ಕೋರ್ಟ್‌ ಮೊರೆ ಹೋಗುವುದಾಗಿ ಮಧ್ಯಪ್ರದೇಶ ಕಾಂಗ್ರೆಸ್‌ನ ಮಾಧ್ಯಮ ಸಮನ್ವಯಕಾರ ನರೇಂದ್ರ ಸಲುಜಾ ಹೇಳಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: