ಕರ್ನಾಟಕಪ್ರಮುಖ ಸುದ್ದಿಮೈಸೂರು

ಅಸುರಕ್ಷತೆ, ಅಸಮಾನತೆಯೇ ಹಿಂದುಗಳ ಜನಸಂಖ್ಯೆ ಕುಸಿತಕ್ಕೆ ಕಾರಣ: ಲೋಕಸಭಾ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ

ಅಸುರಕ್ಷತೆ ಹಾಗೂ ಅಸಮಾನತೆಯೇ ಹಿಂದುಗಳ ಜನಸಂಖ್ಯೆ ಕುಸಿತಕ್ಕೆ ಕಾರಣವೆಂದು ಮಾಜಿ ಕೇಂದ್ರ ಸಚಿವ, ಲೋಕಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ವಿಶ್ಲೇಷಿಸಿದರು.

ಅವರು ಸುತ್ತೂರಿನಲ್ಲಿ ನಡೆಯುತ್ತಿರುವ ಡಾಕ್ಟರ್ ಶ್ರೀಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಜನ್ಮ ಶತಮನೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ, ಶ್ರೀಸಾಮಾನ್ಯರ ಕಲ್ಯಾಣಕ್ಕಾಗಿಯೆ ಇರುವ ಧರ್ಮಗಳು ಸಮಾಜದ ಏಳ್ಗೆಯನ್ನು ಕಡೆಗಣಿಸಿದಾಗ ಸಹಜವಾಗಿಯೇ ಧರ್ಮದಿಂದ ಜನ ವಿಮುಖರಾಗುವರು. 12ನೇ ಶತಮಾನದ ಸಮಾಜ ಸುಧಾರಕ ಕಲ್ಯಾಣದ ಬಸವಣ್ಣನವರು ಅನುಭವದ ಮಂಟಪದ ಮೂಲಕ ಜಾತಿ ರಹಿತ, ವರ್ಗ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಇಂದಿಗೂ ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಮಠಗಳ ಪಾತ್ರ ಗಮನಾರ್ಹ. ಸಮಾಜಕ್ಕೆ ಯಾವುದು ಒಳಿತು ಹಾಗೂ ಕೆಡಕು ಎನ್ನುವುದನ್ನು ಸಾರ್ವಜನಿಕರೆ ನಿರ್ಣಯಿಸಲಿ ಎಂದರು.

mk1

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ ಕೇಂದ್ರ ಸಚಿವರು ಕ್ಷೇತ್ರದ ಅಭಿವೃದ್ಧಿಗಾಗಿ ನೀಡಿರುವ ಆಶ್ವಾಸನೆಗಳನ್ನು ಈಡೇರಿಸಿದರೆ ಜನರ ನಂಬಿಕೆ ಉಳಿಯುವುದು ಎಂದು ಆಶಿಸಿ ಮುಂಬರುವ ಸಾಲಿನಲ್ಲಿ ದೇಶದ ಕೃಷಿಗೆ ಸಂಪೂರ್ಣ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕಳೆದ ಶನಿವಾರ ತಿಳಿಸಿದ್ದು ಕೇಂದ್ರವು ಮಹಾದಾಯಿ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ನ್ಯಾಯ ಒದಗಿಸಿ ನೀರಾವರಿ ಯೋಜನೆಗಳಿಗೆ ಚಾಲನೆ ನೀಡಲು  ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಯವರು ಕೇಂದ್ರದ ಮೇಲೆ ಒತ್ತಡ ಹೇರಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ ಸಮಸ್ಯೆ ಇತ್ಯಾರ್ಥಕ್ಕೆ ಕೇಂದ್ರ ಸರ್ಕಾರಕ್ಕೆ ಪರಿಸ್ಥಿತಿಯ ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

ks1

ಸುತ್ತೂರು ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್, ಗೃಹ ಮಂತ್ರಿ ಪರಮೇಶ್ವರ್, ಸಕ್ಕರೆ ಮತ್ತು ಸಹಕಾರ ಸಚಿವ ಹೆಚ್.ಎಸ್. ಮಹಾದೇವ ಪ್ರಸಾದ್ ಉಪಸ್ಥಿತರಿದ್ದರು.

Leave a Reply

comments

Tags

Related Articles

error: