ದೇಶಪ್ರಮುಖ ಸುದ್ದಿ

ಬಿಹಾರ ಚುನಾವಣೆ: ಚುನಾವಣಾ ಆಯೋಗಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಪಾಟ್ನಾ,ನ.3-ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಗತಿಯಲ್ಲಿದೆ ಇಂದು 94 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ಈ ಮಧ್ಯೆ ಮೂರನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಪರ ಮತಯಾಚನೆ ನಡೆಸುತ್ತಿರುವ ಪ್ರಧಾನಿ ಮೋದಿ ಇಂತಹ ಕಠಿಣ ಕಾಲದಲ್ಲಿ ಹೆಚ್ಚುವರಿ ಸಿದ್ಧತೆ ಹಾಗೂ ಮುನ್ನೆಚ್ಚರಿಕೆಗಳೊಂದಿಗೆ ಚುನಾವಣೆ ನಡೆಸುತ್ತಿರುವ ನಮ್ಮ ಚುನಾವಣಾ ಆಯೋಗವನ್ನು ನಾನು ಅಭಿನಂದಿಸುತ್ತೇನೆ ಎಂದಿದ್ದಾರೆ.
ಅರೇರಿಯಾ ಜಿಲ್ಲೆಯ ಫೋರ್ಬೆಸ್‌ಗಂಜ್‌ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು,
ಕೊರೊನಾ ಸಮಯದಲ್ಲಿ ಜನರು ಮತ ಚಲಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಬರುತ್ತಿದ್ದಾರೆ. ಈ ಮೂಲಕ ಬಿಹಾರ ದೇಶಕ್ಕೆ ಮಾತ್ರವಲ್ಲ ಇಡೀ ಜಗತ್ತಿಗೆ ಸಂದೇಶ ನೀಡುತ್ತಿದೆ. ಇದು ಪ್ರಜಾಪ್ರಭುತ್ವದ ಶಕ್ತಿ. ಭಾರತೀಯ ಮನಸ್ಸಿನಲ್ಲಿ ಪ್ರಜಾಪ್ರಭುತ್ವ ಎಷ್ಟು ಆಳವಾಗಿ ನೆಲೆಗೊಂಡಿದೆ ಎಂಬುದನ್ನು ಪರಿಣಿತರು ಮೌಲ್ಯಮಾಪನ ಮಾಡುತ್ತಾರೆ ಎಂದರು.
ಕಳೆದ ದಶಕದಲ್ಲಿ ಬಿಹಾರ ರಾಜ್ಯದ ಪ್ರತಿಯೊಂದು ಮನೆಗೂ ವಿದ್ಯುತ್ ಮತ್ತು ಅನಿಲ ಸಂಪರ್ಕ ದೊರೆದಿದೆ. ಈಗ, 2021 ರಿಂದ 2030 ರವರೆಗೆ, ಬಿಹಾರದ ಜನರ ಹೆಚ್ಚಿನ ಆಕಾಂಕ್ಷೆಗಳನ್ನು ಈಡೇರಿಸುವ ಸಮಯ ಬಂದಿದೆ ಎಂದು ತಮ್ಮ ಮೈತ್ರಿಗೆ ಮತ ಹಾಕುವಂತೆ ಕೋರಿಕೊಂಡರು.
ಮುಂಜಾನೆ ಏಳು ಗಂಟೆಯಿಂದ ಮತದಾನ ಆರಂಭವಾಗಿದ್ದು 19.26% ಮತದಾನ ನಡೆದಿದೆ. ಸಂಜೆವರೆಗೆ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: