ಪ್ರಮುಖ ಸುದ್ದಿ

ಎರಡು ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಅಂತ್ಯ : ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರ

ರಾಜ್ಯ( ಬೆಂಗಳೂರು)ನ.3:- ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ನಡೆದ ಮತದಾನ ಅಂತ್ಯವಾಗಿದ್ದು, ನಿರೀಕ್ಷೆಯಂತೆ ಆರ್ ಆರ್ ನಗರದಲ್ಲಿ ಅತಿ ಕಡಿಮೆ ಹಾಗೂ ಶಿರಾದಲ್ಲಿ ಹೆಚ್ಚು ಮತದಾನವಾಗಿದೆ.

ಕೊರೋನಾ ಮುಂಜಾಗ್ರತೆಯೊಂದಿಗೆ ಇಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ಎರಡೂ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಮತದಾನದ ಅಂತ್ಯಗೊಂಡಾಗ ಶಿರಾದಲ್ಲಿ ಶೇ. 82.13 ಮತ್ತು ರಾಜರಾಜೇಶ್ವರಿ ನಗರದಲ್ಲಿ ಶೇ.45.24ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಆರ್​ಆರ್​ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಕುಸುಮಾ, ಬಿಜೆಪಿಯಿಂದ ಮುನಿರತ್ನ ಹಾಗೂ ಜೆಡಿಎಸ್​ನಿಂದ ಕೃಷ್ಣಮೂರ್ತಿ ಸ್ಪರ್ಧಿಸಿದ್ದರೆ. ಶಿರಾದಲ್ಲಿ ಕಾಂಗ್ರೆಸ್​ನಿಂದ ಟಿ.ಬಿ ಜಯಚಂದ್ರ, ಬಿಜೆಪಿಯಿಂದ ರಾಜೇಶ್ ಗೌಡ ಹಾಗೂ ಜೆಡಿಎಸ್ ನ ಅಮ್ಮಾಜಮ್ಮ ಅಭ್ಯರ್ಥಿಗಳಾಗಿದ್ದಾರೆ.

ಎರಡು ಕ್ಷೇತ್ರಗಳಿಂದ, ಒಟ್ಟು 1,008 ಬೂತ್ ಗಳನ್ನು ಸ್ಥಾಪಿಸಲಾಗಿತ್ತು. ಎಲ್ಲಾ ಬೂತ್ ಗಳಲ್ಲೂ ಥರ್ಮಲ್ ಸ್ಕ್ಯಾನರ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು. ಕೊರೋನಾ ಪಾಸಿಟಿವ್ ಇದ್ದವರು ಕೂಡ ಇಂದು ತಮ್ಮ ಹಕ್ಕು ಚಲಾಯಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: