ಮೈಸೂರು

ನಂಜನಗೂಡು ವಿಧಾನಸಭಾ ಕ್ಷೇತ್ರ : ಮಧ್ಯಾಹ್ನ ವೇಳೆ ಶೇ.44.98 ಮತದಾನ

ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಏಪ್ರಿಲ್ 9ರಂದು ನಡೆದ ಚುನಾವಣೆಯಲ್ಲಿ  ಮಧ್ಯಾಹ್ನದ ವೇಳೆಗೆ  ಶೇ.44.98 ರಷ್ಟು ಮತದಾನವಾಗಿದೆ.

ಬೆಳಿಗ್ಗೆ ಮಂದಗತಿಯಲ್ಲಿ ಸಾಗಿದ ಮತದಾನ ಮಧ್ಯಾಹ್ನವಾಗುತ್ತಿದ್ದಂತೆ ಚುರುಕುಗೊಂಡಿತು. ಬಿರು ಬಿಸಿಲಿದ್ದರೂ ಬಿಸಿಲನ್ನು ಲೆಕ್ಕಿಸದೇ ಗ್ರಾಮಸ್ಥರು ಮತದಾನದಲ್ಲಿ ತೊಡಗಿದ್ದರು. ಹಲವು ಕಡೆ ವಯೋವೃದ್ಧರು ತಮ್ಮ ಮೊಮ್ಮಕ್ಕಳ ಜೊತೆಗೂಡಿ ಬಂದು ಮತ ಚಲಾಯಿಸಿದರು.

ಅಶೋಕಪುರಂ ಮತಗಟ್ಟೆಯಲ್ಲಿ  ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಶಾಲು, ಕರಪತ್ರ, ಟೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತಗಟ್ಟೆಯ 100 ಮೀಟರ್ ವ್ಯಾಪ್ತಿಯೊಳಗೆ ಪ್ರಚಾರ ನಡೆಸುತ್ತಿದ್ದರಿಂದ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಎರಡೂ ಪಕ್ಷಗಳ ಕಾರ್ಯಕರ್ತರನ್ನು 100 ಮೀಟರ್ ವ್ಯಾಪ್ತಿಯಿಂದ ಹೊರಕ್ಕೆ ಕಳುಹಿಸಲಾಗಿದೆ.

ಕೆಲವು ಕಡೆಗಳಲ್ಲಿ ಇಂತಹ ಘಟನೆ ನಡೆದಿರುವುದು ಬಿಟ್ಟರೆ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಮಧ್ಯಾಹ್ನದ ಬಳಿಕ ಮತದಾನ ಚುರುಕುಗೊಳ್ಳುವ ಸಾಧ್ಯತೆಯಿದೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: