ದೇಶಪ್ರಮುಖ ಸುದ್ದಿ

ಪಾಂಪೋರ್​: ಓರ್ವ ಉಗ್ರನ ಹತ್ಯೆಗೈದ ಭದ್ರತಾ ಪಡೆ

ಶ್ರೀನಗರ,ನ.6- ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾಪಡೆಗಳು ಎನ್​ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹೊಡೆದುರುಳಿಸಿದೆ.

ದಕ್ಷಿಣ ಕಾಶ್ಮೀರದ ಈ ಜಿಲ್ಲೆಯ ಪಾಂಪೋರ್​ ಎಂಬಲ್ಲಿನ ಲಾಲ್​ಪೋರಾದಲ್ಲಿ ನಿನ್ನೆ ಸಂಜೆ ಭದ್ರತಾ ಪಡೆಗಳು ಶೋಧ ಮತ್ತು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿವೆ. ಶೋಧ ಕಾರ್ಯ ಮುಂದುವರಿಯುತ್ತಿದ್ದ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲಿಂದ ಪರಾರಿಯಾಗುವುದಕ್ಕೂ ಪ್ರಯತ್ನಿಸಿದ್ದಾರೆ.

ಇದೇ ವೇಳೆ ಯೋಧರು ಪ್ರತಿದಾಳಿ ನಡೆಸಿದ್ದು, ಅದರಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡೇ ಭದ್ರತಾ ಪಡೆ ಶೋಧ ಮತ್ತು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: