ಪ್ರಮುಖ ಸುದ್ದಿ

108 ಆ್ಯಂಬುಲೆನ್ಸ್‌ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಮಾಡುವಂತೆ ಸಚಿವ ಡಾ.ಸುಧಾಕರ್ ಸೂಚನೆ

ರಾಜ್ಯ( ಬೆಂಗಳೂರು)ನ.7:- ಗುಣಮಟ್ಟದ ಆ್ಯಂಬುಲೆನ್ಸ್‌ ಸೇವೆ ಒದಗಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹಾಲಿ ಜಾರಿಯಲ್ಲಿರುವ 108 ಆ್ಯಂಬುಲೆನ್ಸ್‌ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಮಾಡುವಂತೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸ‌ೂಚನೆ ನೀಡಿದ್ದಾರೆ.

ಈ ಕುರಿತು ಸಭೆ ನಡೆಸಿದ ಬಳಿಕ ಮಾತನಾಡಿದ ಅವರು ತುರ್ತು ಆರೋಗ್ಯ ಸೇವೆ ನೀಡುವ ಆ್ಯಂಬುಲೆನ್ಸ್‌ ಸೇವೆ ಮಹತ್ವದ್ದಾಗಿದ್ದು, ನಮ್ಮಲ್ಲಿರುವ ವ್ಯವಸ್ಥೆಯಲ್ಲಿ ಸಾಕಷ್ಟು ಲೋಪಗಳಿದ್ದು, ಅವುಗಳನ್ನು ಸರಿಪಡಿಸಬೇಕು ಎಂದಿದ್ದಾರೆ. ಕಾಲ್‌ ಸೆಂಟರ್‌ನಲ್ಲಿ ಕರೆ ಸ್ವೀಕರಿಸಿ ಸಮೀಪದಲ್ಲಿ ಇರುವ ಆ್ಯಂಬುಲೆನ್ಸ್‌ಗೆ ಕಳುಹಿಸಬೇಕು. ಉಬರ್‌ ಮತ್ತು ಓಲಾ ಮಾದರಿಯ ಆ್ಯಪ್‌ ವ್ಯವಸ್ಥೆ ಇರಬೇಕು ಎಂದು ನಿರ್ದೇಶನ ನೀಡಿದರು.
108 ಆ್ಯಂಬುಲೆನ್ಸ್‌ ಸೇವೆಗೆ ಸರಕಾರ ದೊಡ್ಡ ಮೊತ್ತ ನೀಡುತ್ತದೆ. ಆದರೆ ಅದಕ್ಕೆ ತಕ್ಕಂತೆ ಗುಣಮಟ್ಟದ ಸೇವೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ದೇಶದಲ್ಲೇ ಮಾದರಿ ಆಗುವಂತಹ ವ್ಯವಸ್ಥೆ ಜಾರಿಗೊಳಿಸಬೇಕಿದೆ. ಅದಕ್ಕಾಗಿ ಹೊಸದಾಗಿ ಟೆಂಡರ್‌ ನೀಡುವಾಗ ಲೋಪಗಳಿಗೆ ಅವಕಾಶವಿಲ್ಲದಂತೆ ಜಾಗತಿಕ ಮಟ್ಟದ ಸೇವೆ ನೀಡುವ ಸಂಸ್ಥೆ/ ಕಂಪೆನಿಗಳಿಗೆ ಗುತ್ತಿಗೆ ನೀಡಬೇಕು ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: