ಪ್ರಮುಖ ಸುದ್ದಿಮೈಸೂರು

ಮೈಸೂರಲ್ಲಿ ಅಂಬೇಡ್ಕರ್ ಭವನಕ್ಕೆ ಶೀಘ್ರ ಚಾಲನೆ : ಸಚಿವದ್ವಯರ ಸೂಚನೆ

ಅಂಬೇಡ್ಕರ್ ಭವನ ನಿರ್ಮಾಣ ಸಂಬಂಧ ವಿಕಾಸ ಸೌಧದಲ್ಲಿ ಸಭೆ

ರಾಜ್ಯ(ಬೆಂಗಳೂರು)ನ.7:-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣ ಸಂಬಂಧ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಶ್ರೀರಾಮುಲು, ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಸಭೆ ನಡೆಯಿತು.

ಅಂಬೇಡ್ಕರ್ ಭವನ ನಿರ್ಮಾಣ ಸಂಬಂಧ ಹಿಂದಿನ ಪ್ರಸ್ತಾವನೆಗಳು ಸೇರಿದಂತೆ ಈಗಿರುವ ನ್ಯೂನತೆಗಳನ್ನು ಸರಿಪಡಿಸಿ ಸಂಪುಟ ಸಭೆಗೆ ಅನುಮೋದನೆಗಾಗಿ ಕ್ರಿಯಾ ಯೋಜನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸೂಚಿಸಲಾಯಿತು. ಅಲ್ಲದೆ, ಬಹಳ ವರ್ಷಗಳ ಬೇಡಿಕೆ ಇರುವುದರಿಂದ ಶೀಘ್ರದಲ್ಲಿ ಚಾಲನೆ ನೀಡುವ ಬಗ್ಗೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಲಾಯಿತು.

ಮುಡಾ ಅಧ್ಯಕ್ಷರಾದ ಎಚ್.ವಿ.ರಾಜೀವ್,
ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಎಲ್.ನಾಗೇಂದ್ರ, ಹರ್ಷವರ್ಧನ್, ಮುಡಾ ಆಯುಕ್ತರಾದ ನಟೇಶ್ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಹಾಜರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: