ಮೈಸೂರು

ಬೆಂಕಿ ಹೊತ್ತಿಕೊಂಡು ಉರಿಯುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಮೈಸೂರು,ನ.8:- ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹೊಸಕೋಟೆ ಗ್ರಾಮದ ಸಮೀಪ ಬೆಂಕಿ ಹೊತ್ತಿಕೊಂಡು ಉರಿಯುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.

ತಾಲೂಕಿನ ಕೆಲ್ಲೂರು ಹೊಸಕೋಟೆ ಗ್ರಾಮದ ರಸ್ತೆಯಲ್ಲಿ ಮೃತದೇಹ ಬಿದ್ದಿದ್ದು, ಶವವು ಹೊತ್ತಿ ಉರಿಯುತ್ತಿರುವುದನ್ನು ನೋಡಿದ ಗ್ರಾಮಸ್ಥರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪಿರಿಯಾಪಟ್ಟಣ ಪೊಲೀಸರು ಈ ಕುರಿತು ಪರಿಶೀಲನೆ ನಡೆಸಿದ್ದಾರೆ.

ಮಹಿಳೆಯ ಗುರುತು ಪತ್ತೆಯಾಗಿಲ್ಲ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದು, ಮಹಿಳೆಯನ್ನು ಕೊಲೆ ಮಾಡಿದ ಬಳಿಕ ರಸ್ತೆ ಬದಿಯಲ್ಲಿ ಸುಟ್ಟು ಹಾಕಿರುವ ಶಂಕೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: