ಪ್ರಮುಖ ಸುದ್ದಿ

ಮಾಜಿ ಐಎಎಸ್ ಅಧಿಕಾರಿ ಎಸ್. ಶಶಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆದೇಶ( ಚೆನ್ನೈ)ನ.10:- ಮಾಜಿ ಐಎಎಸ್ ಅಧಿಕಾರಿ ಎಸ್. ಶಶಿಕಾಂತ್ ಸೆಂಥಿಲ್ ಕಳೆದ ವರ್ಷ ನಾಗರಿಕ ಸೇವೆಗೆ ರಾಜೀನಾಮೆ ನೀಡಿದ್ದು, ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ಚೆನ್ನೈನಲ್ಲಿನ ತಮಿಳುನಾಡು ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ತಮಿಳುನಾಡು ಉಸ್ತುವಾರಿ ದಿನೇಶ್ ಗುಂಡೂರಾವ್, ತಮಿಳುನಾಡು ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಎಸ್. ಅಳಗಿರಿ, ಎಐಸಿಸಿ ಕಾರ್ಯದರ್ಶಿಗಳಾದ ಸಂಜಯ್ ದತ್ ಮತ್ತು ಸಿರಿವೆಲ್ಲಾ ಪ್ರಸಾದ್ ಅವರ ಸಮ್ಮುಖದಲ್ಲಿ ಸೆಂಥಿಲ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಪಕ್ಷಕ್ಕೆ ಹಾರ್ದಿಕ ಸ್ವಾಗತ ಎಂದು ಬರೆದುಕೊಂಡಿದ್ದು, ಪಕ್ಷಕ್ಕೆ ಬರಮಾಡಿಕೊಂಡ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: