ಮೈಸೂರು

ಇಂದು ವಿದ್ಯುತ್ ವ್ಯತ್ಯಯ

ಮೈಸೂರು,ನ.10:- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕುವೆಂಪುನಗರ ಉಪವಿಭಾಗದ 66/11 ಕೆ.ವಿ ಆರ್.ಕೆ ನಗರ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಅರವಿಂದ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕೆಲಸದ ಹಿನ್ನೆಲೆ ನವೆಂಬರ್ 10 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಈ ಹಿನ್ನೆಲೆ ಕುವೆಂಪುನಗರ ಎಂ ಮತ್ತು ಎನ್ ಬ್ಲಾಕ್, ಅರವಿಂದ ನಗರ, ಹುಡ್ಕೋ ಮನೆಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: