ಮೈಸೂರು

ವಿಚಾರಣೆ ವೇಳೆ ಪೊಲೀಸರ ಮೇಲೆ ಹಲ್ಲೆ : ಆರೋಪಿ ಬಂಧನ

ಪ್ರಕರಣವೊಂದರ ಕುರಿತು ವಿಚಾರಣೆ ನಡೆಸಲು ಠಾಣೆಗೆ ಕರೆತಂದಿದ್ದ ವ್ಯಕ್ತಿಯೋರ್ವ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಗೌಸೀಯಾನಗರದ ಸೈಯದ್ ಖಲೀಲುಲ್ಲಾ ಉದಯಗಿರಿ ಠಾಣೆಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ನ್ಯಾಯಾಂಗದ ಬಂಧನದಲ್ಲಿದ್ದಾನೆ. ಈತ ತನ್ನ ತಂದೆ ಮೇಲೆ ಹಲ್ಲೆ ಮಾಡಿದ ಆರೋಪದಡಿ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ಆತನನ್ನು ಎಸ್.ಐ ನಾಗರಾಜು ಠಾಣೆಗೆ ಕರೆತಂದಿದ್ದರು. ಆದರೆ ಈ ವೇಳೆ ಆರೋಪಿ ತಾನು ಸಂಘಟನೆಯೊಂದಕ್ಕೆ ಸೇರಿದವನು ಎಂದು ಎಸ್ ಐ ಮೇಲೆ ಏಕಾಏಕಿ ದಾಳಿ ನಡೆಸಿದ್ದಲ್ಲದೇ, ಅವರ ಸಮವಸ್ತ್ರವನ್ನು ಹಿಡಿದೆಳೆದು, ಮೂವರು ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ ಇನ್ನೋರ್ವ ಸಿಬ್ಬಂದಿಗೆ ಕಚ್ಚಿ ಗಾಯಗೊಳಿಸಿದ್ದಾನೆ. ಠಾಣೆಯ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. (ಕೆ.ಎಸ್.ಎಸ್.ಎಚ್)

Leave a Reply

comments

Related Articles

error: