ಮೈಸೂರು

ನಾಳೆ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಹನ್ನೊಂದನೆ ವಾರ್ಷಿಕ ಘಟಿಕೋತ್ಸವ

ಮೈಸೂರು,ನ.10:- ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯು ವಾರ್ಷಿಕ ಘಟಿಕೋತ್ಸವವನ್ನು ನಾಳೆ ಅಂದರೆ ನ.11 ರ ಬುಧವಾರ ಬೆಳಿಗ್ಗೆ 11 ಘಂಟೆಗೆ ಶ್ರೀ ಸುತ್ತೂರು ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.
ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕ್ಯಾಡೆಮಿಯ ಕುಲಾಧಿಪತಿಗಳಾದ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರು ಘಟಿಕೋತ್ಸವದಲ್ಲಿ ದಿವ್ಯ ಸಾನ್ನಿಧ್ಯ ವಹಿಸುವರು. ವೈದ್ಯಕೀಯ ಸಚಿವ ಡಾ. ಕೆ. ಸುಧಾಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡುವರಲ್ಲದೇ ವಿಜೇತರಿಗೆ ಪದಕ ಪ್ರದಾನ ಮಾಡುವರು.
ಈ ಘಟಿಕೋತ್ಸವದಲ್ಲಿ ಆಡಳಿತ ಮಂಡಳಿ ಸದಸ್ಯರು ಮತ್ತು ದೇಶದ ಇತರೆ ಗಣ್ಯರು ಹಾಗೂ ಶೈಕ್ಷಣಿಕ, ಅಡಳಿತ ಹಾಗೂ ಕೈಗಾರಿಕಾ ಕ್ಷೇತ್ರಗಳ ಗಣ್ಯರುಗಳು, ವಿದ್ಯಾರ್ಥಿಗಳು ಹಾಗೂ ಪೋಷಕರುಗಳು ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ.
ಈ ಘಟಿಕೋತ್ಸವದಲ್ಲಿ ಒಟ್ಟು 1436 ವಿದ್ಯಾರ್ಥಿಗಳು ಸ್ನಾತಕಪೂರ್ವ, ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಪದವಿಯನ್ನು ವೈದ್ಯಕೀಯ, ದಂತ ವೈದ್ಯಕೀಯ, ಔಷಧ ವಿಜ್ಞಾನ, ಆಡಳಿತ ನಿರ್ವಹಣೆ, ಜೀವ ವಿಜ್ಞಾನ ಮತ್ತು ಜೈವಿಕ ವೈದ್ಯಕೀಯ ವಿಜ್ಞಾನದ ನಿಕಾಯದಿಂದ ಪಡೆಯುವವರಿದ್ದಾರೆ. ಈ ಘಟಿಕೋತ್ಸವದಲ್ಲಿ 52 ವಿದ್ಯಾರ್ಥಿಗಳು ಒಟ್ಟು 72 ಪದಕಗಳನ್ನು ಮತ್ತು ಪ್ರಶಸ್ತಿಗಳನ್ನು ಅವರ ಶೈಕ್ಷಣಿಕ ಉತ್ಕೃಷ್ಟತೆಗಾಗಿ ಪಡೆಯುವವರಿದ್ದು, 46 ವಿದ್ಯಾರ್ಥಿಗಳು ಪಿಹೆಚ್ಡಿ ಪದವಿಯನ್ನು ಮತ್ತು 05 ವಿದ್ಯಾರ್ಥಿಗಳು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಪದವಿ (ಡಿಎಂ ಮತ್ತು ಎಂ.ಸಿಹೆಚ್) ಯನ್ನು ಪಡೆಯಲಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: