ಮೈಸೂರು

‘ಸಖಿ ಒನ್ ಸ್ಟಾಪ್ ಸೆಂಟರ್’ಕಟ್ಟಡ ನಿರ್ಮಾಣಕ್ಕೆ ಗುದ್ದಲಿಪೂಜೆ

ಮೈಸೂರು,ನ.11:- ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ವಾರ್ಡ್ ನಂಬರ್ 41ರ ವ್ಯಾಪ್ತಿಯ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ‘ಸಖಿ ಒನ್ ಸ್ಟಾಪ್ ಸೆಂಟರ್’ ಕಟ್ಟಡ ನಿರ್ಮಾಣಕ್ಕೆ ಇಂದು ಶಾಸಕ ಎಲ್ ನಾಗೇಂದ್ರ ಗುದ್ದಲಿಪೂಜೆ ನೆರವೇರಿಸಿದರು.
ಇದು ಕೇಂದ್ರ ಸರ್ಕಾರದ ನಿರ್ಭಯ ಯೋಜನೆಯ ಅನುದಾನದಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿಯಲ್ಲಿ ವೈದ್ಯಕೀಯ ಸೇವೆ , ಪೊಲೀಸ್ ಸೇವೆ ,ಕಾನೂನು ಸೇವೆ ಸಮಾಲೋಚನೆ ಮತ್ತು ತಾತ್ಕಾಲಿಕ ವಸತಿ ಒದಗಿಸುವ ಈ ಕಟ್ಟಡ ನಿರ್ಮಾಣವು 48ಲಕ್ಷರೂ.ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಈ ಸಂದರ್ಭ ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 41ರ ಸದಸ್ಯ ಎಂ.ಬಿ.ನಾಗರಾಜ್, ಮಹಿಳಾ & ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ಪದ್ಮ, ನಿರ್ಮಿತಿ ಕೇಂದ್ರದ ಯೋಜನಾ ಇಂಜಿನಿಯರ್ ಲವ, ಚಾಮರಾಜ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ, ಪ್ರಧಾನ ಕಾರ್ಯದರ್ಶಿ ಪುನೀತ್, ಎಲ್.ಮಂಜುನಾಥ್, ದಿನೇಶ್ ಗೌಡ, ಸುರೇಶ್ ಬಾಬು, ಸ್ವಪ್ನ ಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್).

Leave a Reply

comments

Related Articles

error: