ಮೈಸೂರು

ಸಾಂಪ್ರದಾಯಿಕ ಶೈಲಿಯ ಚಿತ್ರಕಲಾ ಪ್ರದರ್ಶನ

ಮೈಸೂರು ಆರ್ಟ್ ಗ್ಯಾಲರಿ, ಮನೋಹರ ಕಲಾಸಂಗಮ ಸಂಯುಕ್ತ ಆಶ್ರಯದಲ್ಲಿ ಮೈಸೂರು ಶೈಲಿ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.

ಇಲ್ಲಿನ ರಾಮಾನುಜ ರಸ್ತೆಯಲ್ಲಿರುವ ಮೈಸೂರು ಆರ್ಟ್ ಗ್ಯಾಲರಿಯಲ್ಲಿ ಆಯೋಜಿಸಿದ ಕಾರ್ಯಕ್ರಮವನ್ನು ರಾಮ್ ಸನ್ಸ್ ಕಲಾ ಪ್ರತಿಷ್ಠಾನದ ಕಾರ್ಯದರ್ಶಿ ಆರ್.ಜಿ.ಸಿಂಗ್ ಉದ್ಘಾಟಿಸಿದರು.

ಚಿತ್ರಕಲಾ ಪ್ರದರ್ಶನದಲ್ಲಿ ಭಾಗವಹಿಸಿದ ಕಲಾವಿದ ಎಂ.ಆರ್. ಮನೋಹರ್ ಮಾತನಾಡಿ ನಮ್ಮ ಈ ಆರ್ಟ್ ಗ್ಯಾಲರಿ ಸುಮಾರು 10 ,ವರ್ಷಗಳಿಂದಲೂ ಕಲೆಗೆ ಹೆಚ್ಚು ಒತ್ತು ನೀಡುತ್ತಾ ಬಂದಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅನೇಕ ಚಿತ್ರಕಲಾ ಪ್ರದರ್ಶನಕ್ಕೆ ಇಲ್ಲಿ ಅವಕಾಶ ಕಲ್ಪಿಸಲಾಗಿದೆ.  ಮೈಸೂರು ರಾಜರಾದ ಮುಮ್ಮಡಿ ಕೃಷ್ಣ ರಾಜ ಒಡೆಯರ್ ಕಲೆಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದರು. ಅವರ ಕೊಡುಗೆ ಇಂದಿಗೂ ಜೀವಂತವಾಗಿದೆ. ಈ ಬಾರಿ ಮೈಸೂರು ಸಾಂಪ್ರದಾಯಿಕ ಶೈಲಿಯಲ್ಲಿ ಚಿತ್ರಕಲೆಯನ್ನು ಪ್ರದರ್ಶಿಸಲಾಗುತ್ತಿದೆ. ಈ ಚಿತ್ರಕಲೆಗಳ ಪ್ರದರ್ಶನದ ಜೊತೆಗೆ ಮಾರಾಟಕ್ಕೂ ಅವಕಾಶವಿದ್ದು, ಒಂದೊಂದು ಚಿತ್ರಗಳಿಗೂ ಒಂದೊಂದು ರೀತಿಯ  ಬೆಲೆಗಳನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು. (ಕೆ.ಎಸ್-ಎಸ್.ಎಚ್)

 

Leave a Reply

comments

Related Articles

error: