
ಪ್ರಮುಖ ಸುದ್ದಿ
ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ, ಮತ್ತಿಬ್ಬರಿಗೆ ಮಧ್ಯಂತರ ಜಾಮೀನು
ದೇಶ(ನವದೆಹಲಿ)ನ.12:- ಸುಪ್ರೀಂ ಕೋರ್ಟ್ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇನ್ನಿಬ್ಬರಿಗೆ 50000 ರೂ.ಗಳ ವೈಯುಕ್ತಿಕ ಬಾಂಡ್ ಮೇಲೆ ಮಧ್ಯಂತರ ಜಾಮೀನು ನೀಡಿದೆ.
2018ರ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಗೋಸ್ವಾಮಿ ಮತ್ತು ಇತರ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಅಷ್ಟು ಮಾತ್ರವಲ್ಲದೆ ಆದೇಶವನ್ನು ತಕ್ಷಣವೇ ಪಾಲಿಸುವಂತೆ ನೋಡಿಕೊಳ್ಳುವಂತೆ ಅದು ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ.
ಪ್ರಕರಣದಲ್ಲಿ ಗೋಸ್ವಾಮಿ ಹಾಗೂ ಇನ್ನಿಬ್ಬರಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ಸೋಮವಾರ ನಿರಾಕರಿಸಿತ್ತು. ಅದಕ್ಕಾಗಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. (ಏಜೆನ್ಸೀಸ್,ಎಸ್.ಎಚ್)