ದೇಶಪ್ರಮುಖ ಸುದ್ದಿ

ಕೋವಿಡ್ ಸೋಂಕಿನಿಂದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಗುಣಮುಖ

ನವದೆಹಲಿ,ನ.12-ಕೇಂದ್ರ ಸಚಿವೆ ಸ್ಮತಿ ಇರಾನಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಶೀಘ್ರವೇ ಕರ್ತವ್ಯಕ್ಕೆ ಮರಳಲಿದ್ದಾರೆ.

ಸೋಂಕಿನಿಂದ ಗುಣಮುಖರಾಗಿರುವ ವಿಚಾರವನ್ನು ಸ್ವತಃ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ. ತಮ್ಮ ಕೋವಿಡ್ ಪರೀಕ್ಷೆ ನೆಗೆಟಿವ್ ಬಂದಿದ್ದು, ತಮ್ಮ ಚೇತರಿಕೆಗೆ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸುವುದಾಗಿ ಹೇಳಿದ್ದಾರೆ. ಅಲ್ಲದೆ ಶೀಘ್ರವೇ ಕರ್ತವ್ಯಕ್ಕೆ ಮರಳುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕಳೆದ ಅಕ್ಟೋಬರ್ 28ರಂದು ಸ್ಮೃತಿ ಇರಾನಿ ಕೋವಿಡ್ ಪರೀಕ್ಷೆಗೊಳಪಟ್ಟಿದ್ದರು. ಅಂದು ಅವರ ವರದಿ ಪಾಸಿಟಿವ್ ಬಂದಿತ್ತು. ಇದೀಗ ಚಿಕಿತ್ಸೆ ಬಳಿಕ ಅವರು ಚೇತಸಿಕೊಂಡಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: