ಮೈಸೂರು

ಬೆಲೆ ಏರಿಕೆಗೆ ಖಂಡನೆ : ಬಿಜೆಪಿ ನಾಯಕರುಗಳಿಗೆ ಈರುಳ್ಳಿ ಉಡುಗೊರೆ ಕಳುಹಿಸಲಿದೆ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕ

ಮೈಸೂರು,ನ.13:- ಈರುಳ್ಳಿ ಬೆಲೆ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕ ವಿನೂತನ ಪ್ರತಿಭಟನೆಗೆ ಮುಂದಾಗಿದೆ.
ಈರುಳ್ಳಿ ಬೆಲೆ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ದೀಪಾವಳಿ ಹಬ್ಬದ ಪ್ರಯುಕ್ತವಾಗಿ ಉಡುಗೊರೆ ರೂಪದಲ್ಲಿ ರಾಜ್ಯ ಹಾಗೂ ಕೇಂದ್ರ ಬಿಜೆಪಿ ನಾಯಕರಿಗೆ ಈರುಳ್ಳಿ ಕಳುಹಿಸುವ ಮೂಲಕ ವಿನೂತನ ಪ್ರತಿಭಟನೆಗೆ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕ ನಿರ್ಧಾರ ಮಾಡಿದೆ.
ಪ್ರತಿಭಟನೆ ಕುರಿತು ನಗರದ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ , ಈರುಳ್ಳಿ ಬೆಲೆ ಏರಿಕೆ ಖಂಡಿಸಿ ಖುದ್ದಾಗಿ ಅಥವಾ ನಾಯಕರುಗಳ ಹೆಸರುಗಳನ್ನು ಅಂಟಿಸಿ ಪೋಸ್ಟ್ ಮೂಲಕ ಈರುಳ್ಳಿ ರವಾನಿಸಲು ತೀರ್ಮಾನ ಮಾಡಲಾಗಿದೆ. ದೀಪಾವಳಿ ಹಬ್ಬದ ಪ್ರಯುಕ್ತವಾಗಿ ಉಡುಗೊರೆ ರೂಪದಲ್ಲಿ ಈರುಳ್ಳಿ ಕಳುಹಿಸಿ ಪ್ರತಿಭಟನೆ ನಡೆಸುತ್ತೇವೆ ಎಂದರು.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಶ್ರೀಸಾಮಾನ್ಯನ ಬಾಳು ಹೈರಾಣಾಗಿದೆ. ಬಿಜೆಪಿ ನಾಯಕರುಗಳಿಗೆ ಅವಮಾನವಾಗಲೆಂದೇ ಈರುಳ್ಳಿಯನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಕಳುಹಿಸುತ್ತಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: