ಪ್ರಮುಖ ಸುದ್ದಿ

ರಾಜ್ಯದಲ್ಲಿ ಕಡಿಮೆ ಆಗುತ್ತಿದೆ ಕೊರೋನಾ ಮಹಾಮಾರಿಯ ಅಬ್ಬರ : 2,106 ಮಂದಿಗೆ ಪಾಸಿಟಿವ್ ದೃಢ

ರಾಜ್ಯ( ಬೆಂಗಳೂರು)ನ.14:- ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಅಬ್ಬರ ಕಡಿಮೆಯಾಗುತ್ತಿದ್ದು 2,106 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,57,928ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 17 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,491ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

3,433 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 8,18,949ಕ್ಕೆ ಏರಿಕೆಯಾಗಿದೆ. 28,026 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1,030 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,55,245ಕ್ಕೆ ಏರಿಕೆಯಾಗಿದೆ. ನಗರದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: