ಮೈಸೂರು

ರೈತರಿಗಾಗಿ ಬೆಳೆ ದರ್ಶಕ್ 2020-21 ಆ್ಯಪ್

ಮೈಸೂರು.ನ.14:- 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನಡೆಸಲಾಗಿರುವ ಬೆಳೆ ಸಮೀಕ್ಷೆ ಪ್ರಕಾರ ರೈತರು ಮತ್ತು ಖಾಸಗಿ ನಿವಾಸಿಗಳು ನಡೆಸಿರುವ ಬೆಳೆ ಸಮೀಕ್ಷೆ ಮಾಹಿತಿಯನ್ನು ನೋಡಲು ಬೆಳೆ ದರ್ಶಕ್ 2020-21 ಆ್ಯಪ್ ಅನ್ನು ಬಿಡುಗಡೆ ಮಾಡಲಾಗಿದೆ.
ಈ ಆ್ಯಪ್ ಮೂಲಕ ನಿಮ್ಮ ಜಮೀನಿನಲ್ಲಿ ಬೆಳೆ ಸಮೀಕ್ಷೆ ಪ್ರಕಾರ ದಾಖಲಾಗಿರುವ ಬೆಳೆ ವಿವರ, ವಿಸ್ತೀರ್ಣದ ಮಾಹಿತಿ, ಬೆಳೆ ಸಮೀಕ್ಷೆ ಸಮಯದಲ್ಲಿ ಜಮೀನಿನಲ್ಲಿ ತೆಗೆಯಲಾದ GPS ಆಧಾರಿತ ಛಾಯಾಚಿತ್ರಗಳನ್ನು ವೀಕ್ಷಿಸಬಹುದು.
ನಿಮ್ಮ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ ಪಡೆಯಬಹುದು, ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ಮೇಲ್ವಿಚಾರಣೆ ಮಾಡುವ ಸರ್ಕಾರಿ ಅಧಿಕಾರಿಗಳು ಅಂಗೀಕರಿಸಿದ್ದಾರೋ, ಇಲ್ಲವೋ ಎಂದು ಷರಾ ಕಾಲಂ ನಲ್ಲಿ ತಿಳಿಯಬಹುದು. ಒಂದು ವೇಳೆ ಬೆಳೆ ಸಮೀಕ್ಷೆ ವಿವರ ತಪ್ಪಾಗಿ ದಾಖಲಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಬಹುದು. ಮೇಲ್ವಿಚಾರಣೆ ಮಾಡುವ ಸರ್ಕಾರಿ ಅಧಿಕಾರಿಗಳು ನಿಮ್ಮ ಆಕ್ಷೇಪಣೆ ಕುರಿತು ಏನು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಯಬಹುದು.
ಸದರಿ ಬೆಳೆ ಸಮೀಕ್ಷೆ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಬಳಸಿಕೊಳ್ಳಲಾಗುತ್ತದೆ. ಬೆಳೆ ಸಮೀಕ್ಷೆ ಕುರಿತ ನಿಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿರುತ್ತದೆ.
ಸಾರ್ವಜನಿಕರು ಗೂಗಲ್ ಪ್ಲೇ ಸ್ಟೋರ್ ನಲ್ಲಿ “Bele darshak App 2020” ಎಂದು ಟೈಪ್ ಬೆಳೆ ದರ್ಶಕ್ 2020 ಆಪ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 0821-2442239 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: