ಮೈಸೂರು

ಅತಿಥಿ ಉಪನ್ಯಾಸಕರ ಐದು ತಿಂಗಳ ವೇತನ ಬಿಡುಗಡೆಗೊಳಿಸಿ ಸರ್ಕಾರ ಆದೇಶ : ಕೆ.ಟಿ.ಶ್ರೀಕಂಠೇಗೌಡ ಅಭಿನಂದನೆ

ಮೈಸೂರು,ನ.14:- ಅತಿಥಿ ಉಪನ್ಯಾಸಕರ ಐದು ತಿಂಗಳ ವೇತನವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೊರೋನಾ ಸಂಕಷ್ಟ ಕಾಲದಲ್ಲಿ ವೇತನ ಬಿಡುಗಡೆ ಮಾಡುವಂತೆ ಅತಿಥಿ ಉಪನ್ಯಾಸಕರು ಹೋರಾಟ ನಡೆಸಿದ್ದರು. ಇದಕ್ಕೆ ಸ್ಪಂದಿಸಿರುವ ಸರ್ಕಾರ ಐದು ತಿಂಗಳ ವೇತನ ನೀಡಲು ಒಪ್ಪಿಗೆ ಸೂಚಿಸಿದೆ.
14,447 ಮಂದಿ ಅತಿಥಿ ಉಪನ್ಯಾಸಕರಿಗೆ ಏಪ್ರಿಲ್, ಮೇ, ಜೂನ್, ಜುಲೈ, ಆಗಸ್ಟ್ ತಿಂಗಳ ವೇತನ ಬಿಡುಗಡೆಗಾಗಿ ನಿರಂತರ ಹೋರಾಟ ಮಾಡಲಾಗಿತ್ತು. ಈ ಹೋರಾಟಕ್ಕೆ ಪದವಿ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ನಾವು ಸಕ್ರಿಯವಾಗಿ ಪಾಲ್ಗೊಂಡು ಬೆಂಬಲವನ್ನು ನೀಡಿದ್ದೆವು. ಪ್ರಸ್ತುತ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿದ್ದು, ಅಗತ್ಯವಾದ ಹಣವನ್ನು ಆರ್ಥಿಕ ಇಲಾಖೆ ಬಿಡುಗಡೆ ಮಾಡಿದೆ. ಇದಕ್ಕಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಕೆ.ಟಿ.ಶ್ರೀಕಂಠೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: