ಕರ್ನಾಟಕಪ್ರಮುಖ ಸುದ್ದಿ

ಜವಾಹರ್ ಲಾಲ್ ನೆಹರು ಜನ್ಮದಿನ, ಮಕ್ಕಳ ದಿನಾಚರಣೆಗೆ ಗಣ್ಯರಿಂದ ಶುಭಾಶಯ

ಬೆಂಗಳೂರು,ನ.14-ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ ಜವಾಹರ್ ಲಾಲ್ ನೆಹರು ಅವರ ಜನ್ಮದಿನ ಹಾಗೂ ಮಕ್ಕಳ ದಿನಾಚರಣೆಗೆ ಗಣ್ಯರು ಶುಭಕೋರಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ದೇಶದ ಪ್ರಥಮ ಪ್ರಧಾನಿ ಪಂಡಿತ್ ಶ್ರೀ ಜವಾಹರ್ ಲಾಲ್ ನೆಹರು ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಪ್ರೀತಿಯ ಶುಭಾಶಯಗಳು ಕೋರಿದ್ದಾರೆ.

ನಾಳಿನ ಭವ್ಯ ಭಾರತಕ್ಕಾಗಿ ಇಂದಿನ ಮಕ್ಕಳ ಸಮರ್ಪಕ ಪೋಷಣೆ, ರಕ್ಷಣೆ ಮತ್ತು ಶಿಕ್ಷಣ ನಮ್ಮೆಲ್ಲರ ಹೊಣೆಯಾಗಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಅವರ ಸರ್ವತೋಮುಖ ಬೆಳವಣಿಗೆಗೆ ಅವಕಾಶ ಕಲ್ಪಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಆಧುನಿಕ ಭಾರತದ ದುಷ್ಠಾರ, ಜಾತ್ಯತೀತ ಮೌಲ್ಯದ ಪ್ರಬಲ ಪ್ರತಿಪಾದಕ, ಕಾಂಗ್ರೆಸ್ ಪಕ್ಷದ ಹೆಮ್ಮೆಯ ನಾಯಕ ಮತ್ತು ಮಕ್ಕಳಲ್ಲಿ ದೇವರನ್ನು ಕಂಡ ಮಾನವತಾವಾದಿ, ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಹುಟ್ಟುಹಬ್ಬದಂದು ಅಭಿಮಾನದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುವೆ ಎಂದು ಟ್ವೀಟ್ ಮಾಡಿದ್ದಾರೆ.

ಡಿಸಿಎಂ ಡಾ.ಅಶ್ವತ್ಥನಾರಾಯಣ್, ನಮ್ಮ ಮೊದಲ ಪ್ರಧಾನ ಮಂತ್ರಿ ಪಂ. ಜವಾಹರಲಾಲ್ ನೆಹರೂ ಅವರ ಜನ್ಮ ದಿನಾಚರಣೆ. ನಮ್ಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮತ್ತು ಪ್ರಧಾನ ಮಂತ್ರಿಯಾಗಿದ್ದ ಅವಧಿಯಲ್ಲಿ ಭಾರತಕ್ಕೆ ಅವರು ನೀಡಿದ ನಾಕ್ಷತ್ರಿಕ ಕೊಡುಗೆಯನ್ನು ನಾವು ನೆನಪಿಸಿಕೊಳ್ಳುತ್ತೇವೆ. ಅಲ್ಲದೆ, ಎಲ್ಲಾ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳು. ನೀವೆಲ್ಲರೂ ನಾಳೆಯ ಬೆಳಕಾಗಲಿ! ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ.

ಸಚಿವ ಡಾ.ಕೆ.ಸುಧಾಕರ್, ಮಕ್ಕಳ ಪೋಷಣೆ, ಶಿಕ್ಷಣ ಜೊತೆಗೆ ಅವರಲ್ಲಿ ನೈತಿಕತೆ, ಸಾಮಾಜಿಕ ಜವಾಬ್ದಾರಿ, ರಾಷ್ಟ್ರೀಯ ಚಿಂತನೆ, ಸದ್ಭಾವನೆಗಳನ್ನು ಮೈಗೂಡಿಸುವುದು ಮಹತ್ವದ್ದಾಗಿದೆ. ಬೆಳೆಯುವ ಪೈರು ಮೊಳಕೆಯಲ್ಲಿ ಎಂಬಂತೆ ಬಾಲ್ಯದಲ್ಲೇ ಮಕ್ಕಳಿಗೆ ಒಳ್ಳೆಯ ಸಂಸ್ಕಾರಗಳನ್ನು ಕಲಿಸೋಣ. ಉತ್ತಮ ಪ್ರಜೆಗಳನ್ನಾಗಿ ರೂಪಿಸೋಣ. ಮಕ್ಕಳ ದಿನಾಚರಣೆಯ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಸ್ವಾತಂತ್ರ್ಯ ಚಳುವಳಿಯ ಮುಂಚೂಣಿ ನಾಯಕ, ಭಾರತದ ಮೊದಲ‌ ಪ್ರಧಾನಿ, ನವ ಭಾರತ ನಿರ್ಮಾತೃ, ‘ಭಾರತ ರತ್ನ’ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮ ದಿನದಂದು ಮಕ್ಕಳ ಬಗೆಗಿನ ಅವರ ಅತೀವ ಪ್ರೀತಿಯ ಸಂಕೇತವಾಗಿ ಆಚರಿಸಲಾಗುವ ‘ಮಕ್ಕಳ ದಿನಾಚರಣೆ’ಯ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. (ಎಂ.ಎನ್)

Leave a Reply

comments

Related Articles

error: