
ಮೈಸೂರು
ಜಿಲ್ಲಾ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ
ಮೈಸೂರು,ನ.14-ಮೈಸೂರು ಜಿಲ್ಲಾ ಪತ್ರಿಕಾ ಛಾಯಾಗ್ರಾಹಕರ ಬಳಗದ ವತಿಯಿಂದ ಇತ್ತೀಚೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಶಾಸಕ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್ ಸನ್ಮಾನಿಸಿದರು.
ನಗರದ ಹೋಟೆಲ್ ರಿಯೋ ಮೆರಿಡಿಯನ್ ನಲ್ಲಿ ಇಂದು ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಎಸ್.ಟಿ. ರವಿಕುಮಾರ್, ಉಪಾಧ್ಯಕ್ಷ ಅನುರಾಗ್ ಬಸವರಾಜು, ಖಜಾಂಚಿ ನಾಗೇಶ್ ಪಾಣತ್ತಲೆ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಕೃಷ್ನೋಜಿ ರಾವ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಪತ್ರಿಕಾ ಛಾಯಾಗ್ರಾಹಕರಾದ ಪ್ರಗತಿ ಗೋಪಾಲಕೃಷ್ಣ, ಎಸ್.ಆರ್.ಮಧುಸೂದನ್, ಲಕ್ಷ್ಮೀನಾರಾಯಣ ಯಾದವ್, ಶ್ರೀ ರಾಮ್, ಹಂಪಾ ನಾಗರಾಜು, ಚಂದ್ರು, ಸವಿತಾ, ನಂದನ್ ಉಪಸ್ಥಿತರಿದ್ದರು. (ಎಚ್.ಎನ್, ಎಂ.ಎನ್)