ಮೈಸೂರು

ಮೈಸೂರಿಗೆ ಶೀಘ್ರ ವಿಮಾನಯಾನ ಆರಂಭಿಸುವಂತೆ ಸಚಿವರಿಗೆ ಸಂಸದ ಪ್ರತಾಪ್ ಸಿಂಹ ಮನವಿ

ಮೈಸೂರಿಗೆ ಶೀಘ್ರದಲ್ಲೇ ವಿಮಾನಯಾನವನ್ನು ಪುನರಾರಂಭಿಸುವಂತೆ ಕೇಂದ್ರ ವಿಮಾನಯಾನ ರಾಜ್ಯ ಖಾತೆ ಸಚಿವರಲ್ಲಿ ಸಂಸದ ಪ್ರತಾಪ್ ಸಿಂಹ ಮನವಿ ಸಲ್ಲಿಸಿದ್ದಾರೆ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸೋಮವಾರ ಕೇಂದ್ರ ವಿಮಾನಯಾನ ರಾಜ್ಯ ಖಾತೆ ಸಚಿವ ಜಯಂತ್ ಸಿನ್ಹಾ ಅವರನ್ನು ಭೇಟಿಯಾಗಿ ಮೈಸೂರಿಗೆ ಶೀಘ್ರದಲ್ಲೇ ವಿಮಾನಯಾನವನ್ನು ಪುನರಾರಂಭಿಸುವಂತೆ ಮನವಿ ಸಲ್ಲಿಸಿದರು. ಅಷ್ಟೇ ಅಲ್ಲದೇ ಮೈಸೂರಿನ ಪ್ರವಾಸೋದ್ಯಮ ಮತ್ತು ಉದ್ದಿಮೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ವಿಮಾನಯಾನ ಸಂಚಾರ ಅವಶ್ಯಕತೆಯ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಸ್ಪಂದಿಸಿರುವ ಸಚಿವರು ಮೈಸೂರಿಗೆ ಶೀಘ್ರದಲ್ಲೇ ವಿಮಾನಯಾನವನ್ನು ಪುನರಾರಂಭಿಸುವುದಾಗಿ ಭರವಸೆ ನೀಡಿರುತ್ತಾರೆ. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: