ಪ್ರಮುಖ ಸುದ್ದಿ

ಸಂಪತ್ ರಾಜ್ ಬಂಧನ ಹಿನ್ನೆಲೆ : ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಲೇಬೇಕು : ಅಖಂಡ ಶ್ರೀನಿವಾಸಮೂರ್ತಿ

ರಾಜ್ಯ(ಬೆಂಗಳೂರು),ನ.17:- ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಪತ್ ರಾಜ್ ಬಂಧನವಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ, ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಲೇಬೇಕು ಎಂದಿದ್ದಾರೆ.
ಮಾಧ್ಯಗಳ ಜತೆ ಇಂದು ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಪೊಲೀಸರು, ನ್ಯಾಯಾಲಯ, ಮಾಧ್ಯಮ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ನಿಮ್ಮ ಸಹಕಾರದಿಂದ ಸಂಪತ್ ರಾಜ್ ಬಂಧನವಾಗಿದೆ. ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಬೇಕು. ನನಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.
ನಾನು ಎಲ್ಲಿಯೂ ಯಾರ ವಿರುದ್ದವೂ ದ್ವೇಷದ ರಾಜಕಾರಣ ಮಾಡಿಲ್ಲ. ನನ್ನನ್ನೇ ಯಾಕೆ ಟಾರ್ಗೆಟ್ ಮಾಡಿದ್ದಾರೆ ಗೊತ್ತಿಲ್ಲ. ಸಂಪತ್ ರಾಜ್ ಮತ್ತು ನನ್ನ ನಡುವೆ ಯಾವುದೇ ವೈಮನಸ್ಸು ಇಲ್ಲ. ತಪ್ಪು ಮಾಡಿದ್ದಕ್ಕೆ ಓಡಿ ಹೋಗಿದ್ದಾರೆ. ತಪ್ಪು ಮಾಡಿಲ್ಲದಿದ್ದರೇ ಪೊಲೀಸರ ಮುಂದೆ ಹಾಜರಾಗಬೇಕಿತ್ತು. ಹೀಗಾಗಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು ಎಂದು ಅಖಂಡ ಶ್ರೀನಿವಾಸ ಮೂರ್ತಿ ಆಗ್ರಹಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: