ಮೈಸೂರು

ನ.20-ಡಿ.6 : ಜೆಎಸ್ ಎಸ್ ಮೈಸೂರು ಅರ್ಬನ್ ಹಾತ್ ನಲ್ಲಿ“ವಿಶೇಷ ಕೈಮಗ್ಗ ಮೇಳ – ಸಂಸ್ಕೃತಿ-2020”

ಮೈಸೂರು,ನ.17:- ಸಾಂಸ್ಕತಿಕ ಮತ್ತು ಅರಮನೆಗಳ ನಗರ ಮೈಸೂರಿನ ನಾಗರೀಕರಿಗಾಗಿ 20.11.20 ರಿಂದ 6.12.2020 ರವರೆಗೆ ಜವಳಿ ಅಭಿವೃದ್ಧಿ ಆಯುಕ್ತರು (ಕೈಮಗ್ಗ) ಜವಳಿ ಮಂತ್ರಾಲಯ, ನವದೆಹಲಿ ಇವರ ಸಹಯೋಗದೊಂದಿಗೆ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿದೇರ್ಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಬೆಂಗಳೂರು, ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ ಇವರುಗಳ ಸಂಯುಕ್ತ ಆಶ್ರಯದಲ್ಲಿ “ ವಿಶೇಷ ಕೈಮಗ್ಗ ಮೇಳ ” “ಸಂಸ್ಕೃತಿ-2020” ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮೈಸೂರಿನ ಜೆಎಸ್ಎಸ್ ಮೈಸೂರು ಅರ್ಬನ್ ಹಾತ್ ನಲ್ಲಿ ಏರ್ಪಡಿಸಲಾಗಿದೆ.

ಮೇಳದ ಅವಧಿಯಲ್ಲಿ ಕೋವಿಡ್-19ನ ಸರ್ಕಾರದ ಹಾಗೂ ಆಡಳಿತ ಮಂಡಳಿಯ ನಿಯಮಗಳಂತೆ ಮುಂಜಾಗೃತಾ ಕ್ರಮಗಳನ್ನು ಅನುಸರಿಸಲಾಗುವುದು. ಕಳೆದ ಸೆಪ್ಟೆಂಬರ್ನಲ್ಲಿ ಕೋವಿಡ್-19 ಲಾಕ್ ಡೌನ್ ಸಡಿಸಿಲಿಸಿದ ನಂತರ ಪ್ರಪ್ರಥಮವಾಗಿ ದೇಶದಲ್ಲೇ ಮೊದಲು ಜೆಎಸ್ಎಸ್ ಮೈಸೂರು ಅರ್ಬನ್ ಹಾತ್ನಲ್ಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಇದಕ್ಕೆ ಗ್ರಾಹಕರಿಂದ ಉತ್ತಮ ಪ್ರೋತ್ಸಾಹ ದೊರಕಿರುತ್ತದೆ.
ನೇಕಾರರು/ನೇಕಾರರ ಸಹಕಾರ ಸಂಘಗಳು ತಯಾರು ಮಾಡುತ್ತಿರುವ ಕೈಮಗ್ಗ ಉತ್ಪನ್ನಗಳು ಹೆಚ್ಚು ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಹಾಗೂ ಕೈಮಗ್ಗ ಉತ್ಪನ್ನಗಳು ನಶಿಸಿ ಹೋಗದಂತೆ ಕಾಪಾಡಿಕೊಂಡು ಹೋಗಲು ಈ ಮೇಳವನ್ನು ಆಯೋಜಿಸುತ್ತಿರುವುದು ಸರ್ಕಾರದ ಮೂಲ ಉದ್ದೇಶವಾಗಿದೆ. ಈ ವೃತ್ತಿಯನ್ನು ಅವಲಂಭಿಸಿ ಜೀವನ ನಿರ್ವಹಣೆ ಮಾಡುತ್ತಿರುವ ನೇಕಾರರ ಕುಟುಂಬಗಳಿಗೆ ಉತ್ತೇಜಿಸಿ ಒಂದೇ ಸೂರಿನಡಿ ಮಾರುಕಟ್ಟೆಯನ್ನು ಕಲ್ಪಿಸಿ ಪ್ರಾಕರಗಳಿಗೆ ಕೈಮಗ್ಗ ಉತ್ಪನ್ನಗಳ ಅರಿವು ಮೂಡಿಸಿ ಉತ್ಪನ್ನಗಳನ್ನು ಬಳಸಲು ಒಂದು ಸುವರ್ಣ ಅವಕಾಶವನ್ನು ಕಲ್ಪಿಸಿಕೊಡಲಾಗುತ್ತಿದೆ.
ವಿಶೇಷ ಕೈಮಗ್ಗ ಮೇಳದಲ್ಲಿ ಉತ್ತರ ಭಾರತದ ಮಧ್ಯ ಪ್ರದೇಶ, ಉತ್ತರ ಪ್ರದೇಶ ಮತ್ತು ದಕ್ಷಿಣ ಭಾರತದ ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ಗದಗ, ಬಾಗಲಕೋಟೆ, ಗುಲ್ಬರ್ಗ ಮತ್ತು ಇಳಕಲ್ ಪ್ರದೇಶದ ಕೈಮಗ್ಗ ನೇಕಾರ ಸಹಕಾರಿ ಸಂಘಗಳಲ್ಲಿ ಕೈಮಗ್ಗ ನೇಕಾರರು ತಯಾರಿಸಿದ ರೇಷ್ಮೆ, ಹತ್ತಿ ಮತ್ತು ಉಣ್ಣೆ ಹಾಗೂ ವಿವಿಧ ಮಿಶ್ರಿತ ನೂಲುಗಳಿಂದ ತಯಾರಿಸಲಾದ ಕೈಮಗ್ಗ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟವನ್ನು ಏರ್ಪಡಿಸಲಾಗಿದೆ.
ಮೇಳದಲ್ಲಿ ಪ್ರದರ್ಶನಗೊಳ್ಳುತ್ತಿರುವ ಉತ್ಪನ್ನಗಳು
ರೇಷ್ಮೇ ಸೀರೆ, ಮೊಳಕಾಲ್ಮೂರು ಸೀರೆ, ಇಳಕಲ್ ಸೀರೆ, ಕಸೂತಿ ಸೀರೆ, ತಮಿಳುನಾಡಿನ ಖನಿಜವರಮ್ ಸೀರೆ, ಬಿಹಾರದ ತಷರ್ ಸೀರೆ, ಕಾಂತ ಸೀರೆ, ಬಲಚುರಿ ಸೀರೆ, ಬುಟಿಕ್ ಸೀರೆ, ಪಶ್ಚಿಮಬಂಗಾಳದ ಬೆಂಗಾಲಿ ಕಾಟನ್ ಸೀರೆ, ಉತ್ತರಪ್ರದೇಶದ ಬನಾರಸ್ ಸೀರೆ, ಚಿಕನ್ ಎಂಬ್ರಾಯ್ಡಿರಿ ಸೀರೆ, ಮಧ್ಯಪ್ರದೇಶದ ಚಂದೇರಿ, ಮಹೇಶ್ವರಿ ಸೀರೆ, ಒರ್ರಿಸ್ಸಾ ರಾಜ್ಯದ ಸಂಬಲ್ ಪುರಿ ಸೀರೆ, ಇಕ್ಕತ್, ಬೊಂಕಾಯಿ ಸೀರೆ, ಕಾಶ್ಮೀರ ರಾಜ್ಯದ ಪಶ್ಮಿನಾ ಶಾಲ್, ಆಂದ್ರಪ್ರದೇಶದ ಗೊದ್ವಾಲ್ ರೇಷ್ಮೇ ಸೀರೆ, ಕಲ್ಮಕಾರಿ ಸೀರೆ, ಪೊಚಂಪಲ್ಲಿ ಸೀರೆಗಳು ಮತ್ತು ಮಧುರೈ ಟೈ ಅಂಡ್ ಡೈ, ಗುಜರಾತ್ ರಾಜ್ಯದ ಪಟೋಲ ರೇಷ್ಮೆ ಸೀರೆಗಳು ಇತರೆ ಎಲ್ಲಾ ರಾಜ್ಯದ ರೇಷ್ಮೇ ಹಾಗೂ ಕಾಟನ್ ಸೀರೆಗಳು, ಡ್ರೆಸ್ ಮೆಟೀರಿಯಲ್ಗಳು, ಕಸೂತಿ ವಸ್ತ್ರಗಳು, ಟವಲ್ಗಳು, ಮೇಲು ಹಾಸು ಮತ್ತು ಹೊದಿಕೆಗಳು, ನೆಲಹಾಸು ಮತ್ತು ಇತರೆ ಕೈಮಗ್ಗ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ.

ಈ ಮೇಳದ ಉದ್ಘಾಟನೆಯು 20.11.2020 ರಂದು ಸಂಜೆ 4 ಗಂಟೆಗೆ ನೆರವೇರಲಿದೆ ಎಂದು ಡಾ.ಸಿ.ರಂಗನಾಥಯ್ಯ ನಿರ್ದೇಶಕರು(ಯೋ ಮತ್ತು ಆ) ಜೆಎಸ್ಎಸ್ ತಾಂತ್ರಿಕ ಶಿಕ್ಷಣ ವಿಭಾಗ ಮತ್ತು ಲಕ್ಷ್ಮಣ ತಳವಾರ ಉಪ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ ಮೈಸೂರು ಇವರು ಜಂಟಿಯಾಗಿ ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: