ಪ್ರಮುಖ ಸುದ್ದಿ

ಮೊದಲ ದಿನ ಮಂಡ್ಯ ಜಿಲ್ಲೆಯಲ್ಲಿ 3179 ವಿದ್ಯಾರ್ಥಿಗಳು ಹಾಜರಿ

ರಾಜ್ಯ( ಮಂಡ್ಯ)ನ.18:- ಕಳೆದ 8 ತಿಂಗಳಿನಿoದ ಮುಚ್ಚಿದ್ದ ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳು ನಿನ್ನೆಯಿಂದ ಪ್ರಾರಂಭಗೊoಡಿವೆ. ಆದರೆ ಕೋವಿಡ್ ಪರೀಕ್ಷಾ ವರದಿ ಹಾಗೂ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿರುವುದರಿಂದ ನಿರೀಕ್ಷಿತ ಮಟ್ಟದಲ್ಲಿ ವಿದ್ಯಾರ್ಥಿಗಳು ಹಾಜರಾಗಲಿಲ್ಲ.

ಜಿಲ್ಲೆಯಲ್ಲಿ 15 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು, ಒಟ್ಟು 3179 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಆದರೆ ಮೊದಲ ದಿನ ಕೇವಲ 195 ವಿದ್ಯಾರ್ಥಿಗಳು ಮಾತ್ರ ಹಾಜರಿದ್ದರು. ಒಂದೊoದು ಕಾಲೇಜಿನಲ್ಲಿ 20ರಿಂದ 30 ಮಂದಿ ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದರು.

ಈಗಾಗಲೇ ಕೋವಿಡ್ ಪರೀಕ್ಷೆ ಮಾಡಿಸಿದ್ದು, ಅದರಲ್ಲಿ ನೆಗೆಟಿವ್ ವರದಿ ಬಂದ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗಿತ್ತು. ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಉಳಿದವರಿಗೆ ತಮ್ಮ ಪ್ರದೇಶದ ಸುತ್ತಮುತ್ತಲಿನ ಆಸ್ಪತ್ರೆ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಬಂದವರು ಮಾತ್ರ ಕಾಲೇಜಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿಯ ಜೊತೆಗೆ ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದೆ. ಆದ್ದರಿಂದ ಕಾಲೇಜಿಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೂ ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿ ತರುವಂತೆ ಸೂಚಿಸಲಾಗಿದೆ. ಇದು ಸಹ ಮೊದಲ ದಿನ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಲು ಕಾರಣವಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: