ಪ್ರಮುಖ ಸುದ್ದಿ

ದಿನಕಳೆದಂತೆ ರಾಜ್ಯದಲ್ಲಿ ಕೊರೋನಾ ಅಬ್ಬರ : 1,336 ಕೊರೋನಾ ಪ್ರಕರಣ ಪತ್ತೆ

ರಾಜ್ಯ( ಬೆಂಗಳೂರು)ನ.18:- ರಾಜ್ಯದಲ್ಲಿ ದಿನ ಕಳೆದಂತೆ ಕೊರೋನಾ ಮಹಾಮಾರಿಯ ಅಬ್ಬರ ಕಡಿಮೆಯಾಗುತ್ತಿದ್ದು 1,336 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಹೊಸದಾಗಿ 1,336 ಕೊರೋನಾ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ 8,64,140ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 16 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,557 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ 2,100 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ 8,27,241 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 25,323 ಸಕ್ರಿಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ 729 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,58,606ಕ್ಕೆ ಏರಿಕೆಯಾಗಿದೆ. ಸೋಂಕಿಗೆ 9 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 4,018ಕ್ಕೆ ಏರಿಕೆಯಾಗಿದೆ.

Leave a Reply

comments

Related Articles

error: