ಮೈಸೂರು

ಮೈಸೂರು ಜಿಲ್ಲೆಯಲ್ಲಿ 52ಮಂದಿಯಲ್ಲಿ ಕೊರೋನಾ ಸೋಂಕು

ಮೈಸೂರು,ನ.18:- ಮೈಸೂರು ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಕೊರೋನಾ ವೈರಸ್ ಸೋಂಕು ಪ್ರಕರಣ ಇಳಿಮುಖವಾಗುತ್ತಿದ್ದು, ನಿನ್ನೆ 52ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಇದೀಗ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 49,600ಕ್ಕೇರಿದೆ. ನಿನ್ನೆ ಯಾವುದೇ ಸಾವಿನ ಪ್ರಕರಣಗಳು ವರದಿಯಾಗಿಲ್ಲ. 51ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 47,884ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 734 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ ಜಿಲ್ಲೆಯಲ್ಲಿ 982ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: