ಮೈಸೂರು

ನಿಂತಿದ್ದ ಲಾರಿಗೆ ಗುದ್ದಿದ ಬಸ್ : 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಮಂಡ್ಯ: ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕಂಚಿನಕೋಟೆ ಗ್ರಾಮದ ಬಳಿ ಅಪಘಾತಕ್ಕಿಡಾಗಿದೆ.

ಕಂಚಿನಕೋಟೆ ಗ್ರಾಮದ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಬೆಳ್ಳೂರ್ ಕ್ರಾಸ್ ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆ ದಾಖಲಿಸಲಾಗಿದೆ.

ಈ ಸಂಬಂಧ ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: