Uncategorized

ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ ಪ್ರಕರಣ : ಮತ್ತೋರ್ವನ ಬಂಧನ

ಮೈಸೂರು,ನ.18:- ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ ಪ್ರಕರಣ ನಿಗೂಢ ಕೊಲೆ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಪ್ರಸನ್ನ ಕುಮಾರ್ ಎಂದು ಗುರುತಿಸಲಾಗಿದೆ. ಈಗಾಗಲೇ ಪ್ರಮುಖ ಆರೋಪಿ ಸಿದ್ದರಾಜುವನ್ನು ಪೊಲೀಸರು ಬಂಧಿಸಿದ್ದಾರೆ. ಡಿವೈಎಸ್ ಪಿ ಸುಂದರ್ ರಾಜ್ ಮಾರ್ಗದರ್ಶನದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮದುವೆಗೆ ಒತ್ತಾಯಿಸಿದ ಪ್ರೇಯಸಿಯನ್ನು ಪೆಟ್ರೋಲ್ ಸುರಿದು ಪ್ರಮುಖ ಆರೋಪಿ ಸಿದ್ದರಾಜು ಹತ್ಯೆ ಮಾಡಿದ್ದ.
ನಂಜನಗೂಡಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಸಿದ್ದರಾಜು ಪ್ರೇಯಸಿ ಭಾಗ್ಯ ಎಂಬಾಕೆ ಮದುವೆ ಆಗು ಎಂದು ಪೀಡಿಸುತ್ತಿದ್ದಳೆಂಬ ಹಿನ್ನೆಲೆಯಲ್ಲಿ ತನ್ನ ಸ್ನೇಹಿತ ಪ್ರಸನ್ನಕುಮಾರ್ ಎಂಬಾತನ ಜೊತೆ ಸೇರಿ ಪ್ರೇಯಸಿ ಭಾಗ್ಯ ಳನ್ನು ಪೋನ್ ನ ಮುಖಾಂತರ ಸಂಪರ್ಕಿಸಿ ಅವಳನ್ನು ಧರ್ಮಸ್ಥಳದಲ್ಲಿ ಮದುವೆ ಆಗೋಣವೆಂದು ಬರುವುದಕ್ಕೆ ಹೇಳಿ ಕೆಲ್ಲೂರು ಗ್ರಾಮದ ಹಾರಂಗಿ ನಾಲೆಯ ಏರಿ ಮೇಲೆ ಕುತ್ತಿಗೆಗೆ ವೇಲ್ ನಿಂದ ಬಿಗಿದು ನಂತರ ಆಕೆಗೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ್ದರು. ಎಸ್ ಪಿ ಸಿ.ಬಿ.ರಿಷ್ಯಂತ್ ಅವರ ಆದೇಶದಂತೆ ಡಿವೈಎಸ್ ಪಿ. ಸುಂದರ್ ರಾಜ್ ರವರ ನೇತೃತ್ವದಲ್ಲಿ ಪಿರಿಯಾಪಟ್ಟಣ ಪೋಲಿಸ್ ಸಿಬ್ಬಂದಿಗಳು ತನಿಖೆ ಕೈಗೊಂಡು ಆರೋಪಿಗಳನ್ನು ಮೈಸೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ
ಕಾರ್ಯಾಚರಣೆಯಲ್ಲಿ ಸರ್ಕಲ್ ಇನ್ಸ್ ಪೆಕ್ಟರ್, ಪ್ರದೀಪ್ ಪಿ ಎಸ್ ಐ ಸದಾಶಿವ , ಹಾಗೂ ಪೋಲಿಸ್ ಸಿಬ್ಬಂದಿಗಳು ಭಾಗಿಯಾಗಿದ್ದರು. (ಕೆ.ಎಸ್,ಎಸ್.ಎಚ್)

ಇದನ್ನೂ ಓದಿ
ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ ಪ್ರಕರಣ : ಆರೋಪಿಯನ್ನು ಬಂಧಿಸಿದ ಪೊಲೀಸರು

Leave a Reply

comments

Related Articles

error: