ಕ್ರೀಡೆದೇಶ

ಮೂರನೇ ಬಾರಿಗೆ ತಂದೆಯಾದ ಸಂತಸದಲ್ಲಿ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್

ನವದೆಹಲಿ,ನ.20- ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ಆಟಗಾರ, ಆರ್ ಸಿಬಿಯ ಆಟಗಾರ ಎಬಿ ಡಿವಿಲಿಯರ್ಸ್ ಮೂರನೇ ಮಗುವಿಗೆ ತಂದೆಯಾಗಿದ್ದಾರೆ.

ಎಬಿ ಡಿವಿಲಿಯರ್ಸ್ ಪತ್ನಿ ಡಾನಿಯೆಲ್ ಸ್ವಾರ್ಟ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದ ವಿಚಾರವನ್ನು ಇಬ್ಬರು ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ಪತ್ನಿ ಹಾಗೂ ಮಗುವಿನ ಜೊತೆಗೆ ಇರುವ ಫೋಟೋವನ್ನು ಎಬಿ ಡಿವಿಲಿಯರ್ಸ್ ಪೋಸ್ಟ್ ಮಾಡಿ, 11-11-2020ರಂದು ಈ ಜಗತ್ತಿಗೆ ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ. ಎಂಟೆ ಡಿ ವಿಲಿಯರ್ಸ್, ನೀನು ನಮ್ಮ ಕುಟುಂಬಕ್ಕೆ ಸೂಕ್ತವಾದ ಸೇರ್ಪಡೆಯಾಗಿದ್ದೀಯ. ನಿಜಕ್ಕೂ ನಾವು ಅದೃಷ್ಠಶಾಲಿಗಳು. ನಿನ್ನನ್ನು ಪಡೆದ ನಾವು ಧನ್ಯರು ಎಂದು ಬರೆದುಕೊಂಡಿದ್ದಾರೆ.

ಎಬಿ ಡಿವಿಲಿಯರ್ಸ್ ದಂಪತಿ ಐಪಿಎಲ್‌ಗೂ ಮುಂಚಿತವಾಗಿ ಮತ್ತೊಂದು ಮಗುವಿಗೆ ತಂದೆ ತಾಯಿಯಾಗುತ್ತಿರುವ ಸುದ್ದಿಯನ್ನು ಹಂಚಿಕೊಂಡಿದ್ದರು. ಎಬಿ ಡಿವಿಲಿಯರ್ಸ್ ಪತ್ನಿ ಡಾನಿಯೆಲ್ ಸ್ವಾರ್ಟ್ ಇನ್ಸ್ಟಾಗ್ರಾಮ್‌ನಲ್ಲಿ ಮೊದಲಿಗೆ ಈ ವಿಚಾರವನ್ನು ತಿಳಿಸಿದ್ದರು. ಈ ದಂಪತಿ ಈಗಾಗಲೇ ಇಬ್ಬರು ಗಂಡು ಮಕ್ಕಳನ್ನು ಹೊಂದಿದ್ದಾರೆ.

ಐಪಿಎಲ್ ಮುಗಿಸಿ ಕುಟುಂಬವನ್ನು ಸೇರಿಕೊಂಡಿರುವ ಎಬಿ ಡಿವಲಿಯರ್ಸ್ ನೂತನ ಅತಿಥಿಯನ್ನು ಕುಟುಂಬಕ್ಕೆ ಸ್ವಾಗತಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಎಬಿ ಡಿವಿಲಿಯರ್ಸ್ ಕ್ರಿಕೆಟ್ ಲೀಗ್ ಟೂರ್ನಿಗಳಲ್ಲಿ ನಿರಂತರವಾಗಿ ಪಾಲ್ಗೊಳ್ಳುತ್ತಿದ್ದಾರೆ. ಐಪಿಎಲ್‌ನಲ್ಲಿ ಸುದೀರ್ಘ ಕಾಲದಿಂದ ಆರ್‌ಸಿಬಿ ತಂಡದ ಪರವಾಗಿ ಕಣಕ್ಕಿಳಿಯುತ್ತಿದ್ದಾರೆ.  (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: