ಕರ್ನಾಟಕಪ್ರಮುಖ ಸುದ್ದಿ

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ವಿರೋಧ: ಡಿಸೆಂಬರ್ 5 ರಂದು ಕರ್ನಾಟಕ ಬಂದ್ 

ಬೆಂಗಳೂರು,ನ.20- ಮರಾಠ ಅಭಿವೃದ್ದಿ ನಿಗಮ ಸ್ಥಾಪನೆ ವಿರೋಧಿಸಿ ಡಿಸೆಂಬರ್‌ 5 ರಂದು ಕರ್ನಾಟಕ ಬಂದ್ ಮಾಡಲು ಕನ್ನಡ ಪರ ಒಕ್ಕೂಟಗಳು ನಿರ್ಧರಿಸಿವೆ.

ಕನ್ನಡ ಪರ ಒಕ್ಕೂಟಗಳು ನೀಡಿದ್ದ ಬಂದ್ ಕರೆ ಇಂದು ಅಧಿಕೃತಗೊಂಡಿದೆ. ಇಂದು ಒಕ್ಕೂಟದ ಪ್ರಮುಖರು ಬೆಂಗಳೂರಿನಲ್ಲಿ ಸಭೆ ನಡೆಸಿ ಬಂದ್‌ ನಡೆಸುವ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.

ಅಲ್ಲದೆ ಮರಾಠಿ ಅಭಿವೃದ್ದಿ ಪ್ರಾಧಿಕಾರ ವಿರೋಧಿಸಿ ಟೌನ್‌ ಹಾಲ್‌ನಿಂದ ಫ್ರೀಡಂ ಪಾರ್ಕ್‌ ವರೆಗೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.

ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ನಡೆಯಲಿರುವ ಬಂದ್‌ಗೆ ಎಲ್ಲರೂ ಬೆಂಬಲ ನೀಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿಕೊಂಡಿದ್ದಾರೆ. ಆದರೆ ಕನ್ನಡ ರಕ್ಷಣಾ ವೇದಿಕೆ ಇನ್ನೂ ತಮ್ಮ ಸಂಘಟನೆಯ ನಿಲುವನ್ನು ಅಧಿಕೃತಗೊಳಿಸಿಲ್ಲ.

ಕರ್ನಾಟಕ ಬಂದ್ ಇದ್ದರೂ ಆಸ್ಪತ್ರೆ , ಪೆಟ್ರೋಲ್‌ ಬಂಕ್, ಬ್ಯಾಂಕ್, ಸಾರಿಗೆ, ಮೆಡಿಕಲ್‌ ಹಾಗೂ ಸರ್ಕಾರಿ ಕಚೇರಿ ಬಂದ್ ಆಗುವುದಿಲ್ಲ. ಮೆಟ್ರೋ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈ ನಿಟ್ಟಿನಲ್ಲಿ ಸಾರ್ವಜನಿಕರು ಆತಂಕ ಪಡಬೇಕಾದ ಅಗತ್ಯ ಇಲ್ಲ.

ಇನ್ನು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟ ಬಂದ್‌ಗೆ ಹಲವು ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿದೆ. ಈ ನಿಟ್ಟಿನಲ್ಲಿ ಯಾವುದೇ ವಾಹನ ಸಂಚಾರ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ. ಪರಿಣಾಮ ಆಟೋ ಸಂಚಾರ, ಟ್ಯಾಕ್ಸಿ ಸಂಚಾರ, ಬೀದಿ ಬದಿ ಅಂಗಡಿ, ಮದ್ಯ ಮಾರಾಟ, ಹೋಟೆಲ್‌ ಹಾಗೂ ಇತರ ಅಂಗಡಿ ಮುಂಗಟ್ಟುಗಳು ಬಂದ್ ಆಗುವ ಸಾಧ್ಯತೆ ಹೆಚ್ಚಾಗಿವೆ.

ಮರಾಠಿಗರ ಅಭಿವೃದ್ದಿ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮರಾಠಿ ಅಭಿವೃದ್ದಿ ನಿಗಮವನ್ನು ಸ್ಥಾಪನೆ ಮಾಡಿದೆ. ಆದರೆ ಇದಕ್ಕೆ ಕನ್ನಡ ಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮರಾಠಿ ಅಭಿವೃದ್ದಿ ನಿಗಮವನ್ನು ವಾಪಸ್‌ ಪಡೆದುಕೊಳ್ಳಲು ಆಗ್ರಹಿಸಿವೆ. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಲಾಗಿದೆ. (ಎಂ.ಎನ್)

Leave a Reply

comments

Related Articles

error: