ದೇಶಪ್ರಮುಖ ಸುದ್ದಿಮನರಂಜನೆ

ಬಾಲಿವುಡ್ ಡ್ರಗ್ಸ್ ಪ್ರಕರಣ : ಹಾಸ್ಯನಟಿ ಭಾರತೀ ಸಿಂಗ್ ನಿವಾಸದ ಮೇಲೆ ಎನ್ ಸಿಬಿ ದಾಳಿ : ಗಾಂಜಾ ವಶ

ದೇಶ(ಮುಂಬೈ)ನ.21:- ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಹಾಸ್ಯನಟಿ ಭಾರತಿ ಸಿಂಗ್ ಅವರ ಮುಂಬೈ ನಿವಾಸದ ಮೇಲೆ ದಾಳಿ ನಡೆಸಿದ್ದು, ಅವರ ಮನೆಯಿಂದ ಗಾಂಜಾ ವಶಪಡಿಸಿಕೊಂಡಿದೆ.
ಹಾಸ್ಯ ನಟಿ ಭಾರತಿ ಸಿಂಗ್ ಮತ್ತು ಅವರ ಪತಿ ಹರ್ಷ ಅವರ ನಿವಾಸದ ಮೇಲೆ ಮುಂಬೈ ವಲಯ ಘಟಕದ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ದಾಳಿ ನಡೆಸಿದೆ. ಎನ್ಸಿಬಿ ಅಂಧೇರಿ, ಲೋಖಂಡ್ವಾಲಾ ಮತ್ತು ವರ್ಸೋವಾ ಪ್ರದೇಶಗಳಲ್ಲಿ ದಾಳಿ ನಡೆಸುತ್ತಿದೆ.
ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ ಸೆರೆ ಸಿಕ್ಕ ಡ್ರಗ್ಸ್ ಪೆಡ್ಲರ್ ನೀಡಿದ ಮಾಹಿತಿಯಾಧರಿಸಿ ಭಾರತಿ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ಮನೆಯಲ್ಲಿದ್ದ ಗಾಂಜಾ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: