ದೇಶಪ್ರಮುಖ ಸುದ್ದಿ

ಗುಜರಾತ್ ನಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ

ಸುರೇಂದ್ರನಗರ್,(ಗುಜರಾತ್),ನ.21- ಕಾರು ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಸುರೇಂದ್ರನಗರ ಜಿಲ್ಲೆಯಲ್ಲಿ ನಡೆದಿದೆ.

ಸುರೇಂದ್ರ ನಗರದ ಪಟ್ದಿ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಉಪ ಅಧೀಕ್ಷಕ ಹೆಚ್.ಪಿ.ದೋಶಿ ಅವರು ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ದೌಡಾಯಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. (ಏಜೆನ್ಸೀಸ್, ಎಂ.ಎನ್)

 

Leave a Reply

comments

Related Articles

error: