ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು,ನ.21:- ಶಾಸಕ ಜಿ.ಟಿ.ದೇವೇಗೌಡ ಅವರಿಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮೈಸೂರು-ಗದ್ದಿಗೆ ಮುಖ್ಯರಸ್ತೆಯಿಂದ ಗಣಗರಹುಂಡಿ-ಸಾಹುಕಾರಹುಂಡಿ ಸೇರುವ ರಸ್ತೆಗೆ 50.00 ಲಕ್ಷ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದರು. ನಂತರ ಹುಯಿಲಾಳು ಗ್ರಾಮದಲ್ಲಿ ತಾ.ಪಂ.ಅನುದಾನದಲ್ಲಿ ನಿರ್ಮಾಣಗೊಂಡಿರುವ ಶುದ್ಧಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿದರು. ನಂತರ ನಾಗನಹಳ್ಳಿ ಗ್ರಾಮದಲ್ಲಿ ಎಸ್.ಸಿ.ಕಾಲೋನಿಯಲ್ಲಿ ರೂ. 75.00 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ ಮತ್ತು ಸಿ.ಸಿ.ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಕಾಮನಕೆರೆಹುಂಡಿ ಗ್ರಾಮದಲ್ಲಿ ರೂ.12.00 ಲಕ್ಷ ವೆಚ್ಚದಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಆಲನಹಳ್ಳಿ ಗ್ರಾಮ ವ್ಯಾಪ್ತಿಯ ಗಿರಿದರ್ಶಿನಿ ಬಡಾವಣೆಯಲ್ಲಿ ರೂ 1.50 ಕೋಟಿ ವೆಚ್ಚದಲ್ಲಿ ಚರಂಡಿ ನಿರ್ಮಾಣ ಮತ್ತು ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಆಲನಹಳ್ಳಿ ಗ್ರಾಮದ ವ್ಯಾಪ್ತಿಯ ಕೆ.ಬಿ.ಎಲ್. ಬಡಾವಣೆಯ ವ್ಯಾಪ್ತಿಯ 50.00ರೂ. ಲಕ್ಷ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅರುಣ್ ಕುಮಾರ್, ನಾಗನಹಳ್ಳಿ ದಿನೇಶ್, ಮಾದೇಗೌಡ, ತಾ.ಪಂ.ಸದಸ್ಯರಾದ ಹುಯಿಲಾಳು ಭಾಗ್ಯ ರಮೇಶ್, ಮಹದೇವು, ತುಳಸಿ ಗೋವಿಂದರಾಜು ಹಾಗೂ ತಹಶೀಲ್ದಾರ್ ರಕ್ಷಿತ್, ಇ.ಓ.ಕೃಷ್ಣಕುಮಾರ್, ಎ.ಇ.ಇ. ರಾಜು, ನಾಗರಾಜು ಗ್ರಾಮದ ಎಲ್ಲಾ ಮುಖಂಡರುಗಳು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: