ಮೈಸೂರು

ಮೈಸೂರಿನಲ್ಲಿಂದು 100 ಹೊಸ ಕೊರೋನಾ ವೈರಸ್ ಸೋಂಕು ಪತ್ತೆ

ಮೈಸೂರು,ನ.22:- ಮೈಸೂರಿನಲ್ಲಿಂದು 100 ಹೊಸ ಕೊರೋನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ಮೈಸೂರಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 50,023 ಕ್ಕೇರಿಕೆಯಾಗಿದೆ. ಮೈಸೂರು ಜಿಲ್ಲೆಯಲ್ಲಿಂದು ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 50 ಸಾವಿರದ ಗಡಿ ದಾಟಿದೆ. ಇಂದು 107 ಕೊರೋ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಇದುವರೆಗೂ 48,351 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 683ಕ್ಕೇರಿದೆ. ಮೈಸೂರಿನಲ್ಲಿಂದು ಓರ್ವ ಕೊರೋನಾ ಸೋಂಕಿತ ಸಾವನ್ನಪ್ಪಿದ್ದಾರೆ.
ಮೈಸೂರಿನಲ್ಲಿ ಇದುವರೆಗೆ 989 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: