ದೇಶಪ್ರಮುಖ ಸುದ್ದಿ

ಅಪ್ಪಳಿಸಲಿದೆ `ನಿವಾರ್’ ಚಂಡಮಾರುತ: ತಮಿಳುನಾಡು, ಪುದುಚೇರಿಯಲ್ಲಿ ರೆಡ್ ಅಲರ್ಟ್ ಘೋಷಣೆ

ಚೆನ್ನೈ,ನ.23-ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ `ನಿವಾರ್’ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ರೆಡ್​ ಅಲರ್ಟ್​ ಘೋಷಿಸಲಾಗಿದೆ.

ಚಂಡಮಾರುತ ಹಿನ್ನೆಲೆ ಕರಾವಳಿ ತೀರದಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಸಮುದ್ರ ತೀರದಲ್ಲಿ 80ರಿಂದ 100 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಗಂಟೆಗೆ ನೂರು ವೇಗದಲ್ಲಿ ಬಿರುಗಾಳಿ ತಮಿಳುನಾಡು ಹಾಗೂ ಪುದಚೇರಿಯ ಕಡಲ ತೀರಕ್ಕೆ ಬಂದು ಅಪ್ಪಳಿಸಲಿದೆಯಂತೆ. 24 ಗಂಟೆಯೊಳಗೆ ಇದು ಚಂಡಮಾರುತವಾಗಿ ಬದಲಾಗಿ ಕಡಲತೀರದಲ್ಲಿ ಅಪ್ಪಳಿಸಿ ಭಾರೀ ಪರಿಣಾಮವನ್ನು ಉಂಟು ಮಾಡಲಿದೆ. ಇನ್ನು ಚಂಡಮಾರುತದಿಂದಾಗಿ ಎರಡು ದಿನಗಳ ಕಾಲ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈಗಾಗಲೇ ಭಾರೀ ಬಿರುಗಾಳಿ ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಬೀಸಲು ಆರಂಭಿಸಿದೆ. ಹವಾಮಾನ ತಜ್ಞರ ಪ್ರಕಾರ, ನಿವಾರ್ ಚಂಡಮಾರುತವು ಮುಂದಿನ 24 ಗಂಟೆಗಳ ಕಾಲ ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ದಾಟಿ ಹೋಗುತ್ತದೆ. ನವೆಂಬರ್ 25ರ ಮಧ್ಯಾಹ್ನದವರೆಗೆ ಈ ಚಂಡಮಾರುತದ ಅಬ್ಬರ ಇರಲಿದೆ ಎಂದು ತಿಳಿಸಿದ್ದಾರೆ.

ನವೆಂಬರ್ 25ರಿಂದ ಈ ನಿವಾರ್ ಚಂಡಮಾರುತದಿಂದಾಗಿ ತಮಿಳುನಾಡಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದ್ದು, ಚೆನ್ನೈ, ನಾಗಪಟ್ನಂ, ತಂಜಾವೂರ್‌, ಪುದುಕೊಟೈ, ತಿರುವಾರೂರು, ರಾಮನಾಥಪುರಂ ಜಿಲ್ಲೆಗಳಲ್ಲಿ ನಿವಾರ್ ಚಂಡಮಾರುತರ ಪರಿಣಾಮ ಬೀರಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.

ಇನ್ನು ಹವಾಮಾನ ಇಲಾಖೆ ಎಚ್ಚರಿಕೆ ಬೆನ್ನಲ್ಲೇ ಎನ್‌ಡಿಆರ್‌ಎಫ್‌ ತಂಡ ತಮಿಳುನಾಡಿನ ಕಾರವಾಳಿ ಪ್ರದೇಶಕ್ಕೆ ತೆರಳಿದ್ದು ಐದು ತಂಡಗಳಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಸಮುದ್ರ ತೀರದಲ್ಲಿ ವಾಸಿಸುವ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಿದೆ. ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: