ದೇಶಪ್ರಮುಖ ಸುದ್ದಿ

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ನಿಧನ

ದೇಶ( ಗುವಾಹಟಿ)ನ.23:- ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ನಿಧನರಾಗಿದ್ದಾರೆ.
ಅವರಿಗೆ 84ವರ್ಷ ವಯಸ್ಸಾಗಿತ್ತು. ಸೋಮವಾರ ಸಂಜೆ 5.34ಕ್ಕೆ ಅವರು ಕೊನೆಯುಸಿರೆಳೆದರು ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಾಂತ್ ಬಿಸ್ವ ಶರ್ಮಾ ಹೇಳಿದ್ದಾರೆ.

ಕೋವಿಡ್-19 ನಂತರ ಕಾಣಿಸಿಕೊಂಡ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಾಂಗ್ರೆಸ್ ಮುಖಂಡ ತರುಣ್ ಗೊಗೊಯಿ ದಾಖಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿತ್ತು.
ಗುವಾಹಟಿ ವೈದ್ಯಕೀಯ ಕಾಲೇಜು ಹೊರಗಡೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹಿಮಾಂತ್ ಬಿಸ್ವ ಶರ್ಮಾ, ಗೊಗೊಯಿ ನಿಧನ ಸುದ್ದಿ ತಿಳಿಸಿದ್ದಾರೆ.
ಮೂರು ಬಾರಿ ಅಸ್ಸಾಂ ಮುಖ್ಯಮಂತ್ರಿ ಆಗಿದ್ದ ಗೊಗೊಯಿ ಅವರಿಗೆ ಆಗಸ್ಟ್ 26ರಂದು ಕೋವಿಡ್ ದೃಢಪಟ್ಟ ನಂತರ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಮನೆಗೆ ತೆರಳಿ ಆಮೇಲೆ ನವೆಂಬರ್ 2ರಂದು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ನವೆಂಬರ್ 21ರಂದು ಬಹು ಅಂಗಾಂಗ ವೈಫಲ್ಯದಿಂದಾಗಿ ಆರೋಗ್ಯ ತೀವ್ರ ಹದಗೆಟ್ಟಿತ್ತು. ಭಾನುವಾರ ಅವರಿಗೆ ಡಯಾಲಿಸಿಸ್ ಮಾಡಿದ್ದು ಸೋಮವಾರ ಬೆಳಗ್ಗೆ ಆರೋಗ್ಯ ಸ್ಥಿತಿ ಗಂಭೀರವಾಯಿತು ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: