ಮೈಸೂರು

ಮಹಾನ್ ವ್ಯಕ್ತಿಗಳ ಜೀವನದ ಹಾದಿಯನ್ನು ಯುವ ಪೀಳಿಗೆ ಅನುಸರಿಸಬೇಕು : ಡಾ.ಎಸ್.ಶಿವರಾಜಪ್ಪ

ಮೈಸೂರಿನ ಕುವೆಂಪು ನಗರದಲ್ಲಿರುವ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ರವರ 125ನೇ ಜನ್ಮದಿನಾಚರಣೆ ಹಾಗೂ ಎನ್ ಎಸ್ ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಕಾಲೇಜು ಆವರಣದಲ್ಲಿ ಆಯೋಜಿಸಿ ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿ,  ಮೈಸೂರು ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಎಸ್.ಶಿವರಾಜಪ್ಪ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರಲ್ಲಿ ಒಬ್ಬರು. ಇವರು ದಲಿತರ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ಇವರ ಕೊಡುಗೆಗಳು ಇಂದಿಗೂ ಜೀವಂತವಾಗಿದೆ. ಇವರ ಒಂದು ಜೀವನದ ಹಾದಿಯನ್ನು ಇಂದಿನ ಯುವ ಪೀಳಿಗೆಯವರು ಅನುಸರಿಸಿದರೆ ಉತ್ತಮ ಜೀವನವನ್ನು ನಡೆಸಬಹುದಾಗಿದೆ ಎಂದರು.
ಈ ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಗಳಿಸಿದೆ. ಇಂತಹ ಅನೇಕ ಮಹಾನ್ ವ್ಯಕ್ತಿಗಳ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಹಾಗೂ ರಾಷ್ಟ್ರೀಯ ಸೇವಾ ಯೋಜನೆಗಳಲ್ಲಿ  ವಿದ್ಯಾರ್ಥಿಗಳನ್ನು ಶಿಕ್ಷಕರು ತೊಡಗುವಂತೆ ಮಾಡಿದರೇ   ಶಿಸ್ತು ಬೆಳೆಯುತ್ತದೆ ಎಂದರು.

ಸಮಾರಂಭದಲ್ಲಿ ಐ.ಇ.ಟಿ  ಅಧ್ಯಕ್ಷ  ಹೆಚ್.ಎನ್. ನಾಗರಾಜು, ಎಂ.ಪುಟ್ಟಸ್ವಾಮಿ, ಪ್ರಾಂಶುಪಾಲ ಡಾ.ಎಂ.ಎನ್.ಮನೋಹರನ್, ಪ್ರಾಧ್ಯಾಪಕ ಎಂ.ಮಹದೇವಯ್ಯ ಮತ್ತಿತರರು ಉಪಸ್ಥಿತರಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: