ಮೈಸೂರು

ಇರ್ವಿನ್ ರಸ್ತೆಯ ಅಗಲೀಕರಣ, ಡಾಂಬರೀಕರಣ ಪರಿಶೀಲನೆ ನಡೆಸಿದ ಶಾಸಕ ನಾಗೇಂದ್ರ

ಮೈಸೂರು,ನ.24:- ಮೈಸೂರು ನಗರದ ಇರ್ವಿನ್ ರಸ್ತೆಯ ಅಗಲೀಕರಣ, ಡಾಂಬರೀಕರಣ ಕಾಮಗಾರಿಯನ್ನು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಲ್.ನಾಗೇಂದ್ರ ಅವರು ಕಾಮಗಾರಿಯ ಗುಣಮಟ್ಟ ಕಾಪಾಡುತ್ತಿರುವ ಕುರಿತಂತೆ ಪರಿಶೀಲಿಸಲು ನಿನ್ನೆ ಖುದ್ದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಈ ಸಮಯದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಎಂ. ಡಿ. ನಾಗರಾಜ್, ಪಾಲಿಕೆಯ ಅಧೀಕ್ಷಕ ಅಭಿಯಂತರರಾದ / ಉಪ ಆಯುಕ್ತರಾದ ಬಿಳಿಗಿರಿ, ಅಧಿಕಾರಿಗಳು, ಚಾಮರಾಜ ಕ್ಷೇತ್ರದ ಭಾ.ಜ.ಪ ಅಧ್ಯಕ್ಷರಾದ ಕೆ. ಸೋಮಶೇಖರ ರಾಜು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: