ಕರ್ನಾಟಕಪ್ರಮುಖ ಸುದ್ದಿಮೈಸೂರು

‘ನಿವಾರ್’ ಚಂಡಮಾರುತ ಹಿನ್ನೆಲೆ : ಅಲರ್ಟ್ ಆಗಿರಲು ಸೂಚಿಸಿದ್ದೇನೆ ; ಸಿಎಂ ಬಿಎಸ್ ವೈ ಮಾಹಿತಿ

ಮೈಸೂರು,ನ.25:- ಇಂದು ಸಂಜೆ ಭೀಕರ ‘ನಿವಾರ್’ ಚಂಡಮಾರುತ ಕರಾವಳಿ ತೀರಕ್ಕೆ ಅಪ್ಪಳಿಸುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈಗಾಗಲೇ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿದೆ.
ಏತನ್ಮಧ್ಯೆ ನಿನ್ನೆಯಿಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೈಸೂರು ಪ್ರವಾಸದಲ್ಲಿದ್ದು, ಚಂಡಮಾರುತ ಕುರಿತು ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ತಮಿಳುನಾಡು ಕರಾವಳಿ ತೀರದಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸಲಿದೆ ಎಂಬ ಮಾಹಿತಿ ಇದೆ. ಇದರಿಂದ ರಾಜ್ಯದಲ್ಲಿಯೂ ಭಾರೀ ಮಳೆಯಾಗುವ ಸಂಭವವಿದ್ದು ಸಂಬಂಧಪಟ್ಟ ಜಿಲ್ಲೆಯ ಅಧಿಕಾರಿಗಳಿಗೆ ಅಲರ್ಟ್ ಆಗಿರಲು ಸೂಚಿಸುವಂತೆ ಹೇಳಿದ್ದೇನೆ ಎಂದರು.
ನಿವಾರ್ ಚಂಡಮಾರುತ ಅಪ್ಪಳಿಸುವ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು, ನೀವು ಚಂಡ ಮಾರುತ ತಡೆಯೋಕೆ ಆಗುತ್ತೇನ್ರಿ ಎಂದು ಪ್ರಶ್ನಿಸಿದರು. ಅಲ್ಲದೆ ಇದಕ್ಕಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಯೆಲ್ಲೋ ಅಲರ್ಟ್ ಘೋಷಣೆ ಮಾಡಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು ಇಂದು ಇನ್ನೂ 25 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡುತ್ತೇವೆ. ಇಂದು ಸಂಜೆಯ ವೇಳೆಗೆ ಆದೇಶ ಹೊರಡಿಸಲಾಗುತ್ತದೆ. ಯಾರ್ಯಾರಿಗೆ ಕೈ ತಪ್ಪಿದೆಯೋ ಅವರಿಗೆ ಮುಂದೆ ಅವಕಾಶ ನೀಡುತ್ತೇವೆ ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿ ಸಂಪುಟ ವಿಸ್ತರಣೆ ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದೆ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: