ಕರ್ನಾಟಕಪ್ರಮುಖ ಸುದ್ದಿಮೈಸೂರು

ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಸಂಕೀರ್ಣ ದ ಪುನರ್ ನಿರ್ಮಾಣ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಬಿಎಸ್ ವೈ

ಮೈಸೂರು, ನ.25:- ಮೈಸೂರು ಜಿಲ್ಲೆಯ ಮುಡುಕುತೊರೆ ಶ್ರೀ ಕ್ಷೇತ್ರದಲ್ಲಿ ಶ್ರೀ ಭ್ರಮರಾಂಬಾ ಸಮೇತ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಸಂಕೀರ್ಣದ ಪುನರ್ ನಿರ್ಮಾಣದ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಇಂದು ನೆರವೇರಿಸಿದರು.
ಈ ಸಂದರ್ಭದಲ್ಲಿ ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿದೇಶೀಕೇಂದ್ರ ಮಹಾಸ್ವಾಮಿಗಳು, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎಸ್.ಎ.ರಾಮದಾಸ್ ಸೇರಿದಂತೆ ಹಲವು ಗಣ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.
ಇದೇ ವೇಳೆ ದೇವಸ್ಥಾನದ ವಿನ್ಯಾಸ ಹಾಗೂ ಪುನರ್ ನಿರ್ಮಾಣದ ವಿಡಿಯೋವನ್ನು ಅನಾವರಣಗೊಳಿಸಲಾಯಿತು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: