
ಕರ್ನಾಟಕಪ್ರಮುಖ ಸುದ್ದಿ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ಇಂದಿನಿಂದ ಮೂರು ದಿನ ಭಾರೀ ಮಳೆ
ರಾಜ್ಯ( ಬೆಂಗಳೂರು)ನ.26:- ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಚಂಡಮಾರುತ ಪರಿಣಾಮದಿಂದ ರಾಜ್ಯದಲ್ಲಿ ನ.26ರಿಂದ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ಬಳ್ಳಾರಿಯಲ್ಲಿ ನ.26ರಿಂದ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬಹತೇಕ ಜಿಲ್ಲೆಗಳಲ್ಲಿ ನ.28ರಂದು ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ.
ನಿವಾರ್ ಚಂಡಮಾರುತ ಪರಿಣಾಮದಿಂದ ತಮಿಳುನಾಡಿನಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಥಂಡಿ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೆ, ಮೋಡ ಕವಿದ ವಾತಾವರಣವಿದೆ. ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಏರಳಿತವಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. (ಕೆ.ಎಸ್,ಎಸ್.ಎಚ್)