ಪ್ರಮುಖ ಸುದ್ದಿ

ರಾಜ್ಯದಲ್ಲಿ 1630 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ರಾಜ್ಯ( ಬೆಂಗಳೂರು)ನ.26:- ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1630 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಇದುವರೆಗಿನ ಒಟ್ಟೂ ಸೋಂಕಿತರ ಸಂಖ್ಯೆ 8,78,055ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಒಂದೇ ದಿನ 19 ಮಂದಿ ಕೊರೋನಾಗೆ ಬಲಿಯಾಗಿದ್ದು ಒಟ್ಟು ಸಾವಿನ ಸಂಖ್ಯೆ 11,714ಕ್ಕೇರಿದೆ. 1333ಮಂದಿ ಡಿಸ್ಚಾರ್ಜ್ ಆಗಿದ್ದು ಇದುವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 8,41,432ಕ್ಕೆ ಏರಿದೆ.

ರಾಜ್ಯದಲ್ಲಿ 24,890 ಸಕ್ರಿಯ ಪ್ರಕರಣಗಳಿದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ತಿಳಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: